Home » 1000 ಗ್ರಾಮ ಲೆಕ್ಕಾಧಿಕಾರಿಗಳ ನೇಮಕ
 

1000 ಗ್ರಾಮ ಲೆಕ್ಕಾಧಿಕಾರಿಗಳ ನೇಮಕ

by Kundapur Xpress
Spread the love

 ಬೆಂಗಳೂರು :ಕಂದಾಯ ಇಲಾಖೆಯ ಕೆಲಸವನ್ನು ಮತ್ತಷ್ಟು ಚುರುಕುಗೊಳಿಸಲು ಹಾಗೂ ಜನರಿಗೆ ಸರಳ ಆಡಳಿತ ನೀಡುವ ಉದ್ದೇಶದಿಂದ ಶೀಘ್ರದಲ್ಲೇ 1000 ಗ್ರಾಮ ಲೆಕ್ಕಾಧಿಕಾರಿಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ವಿಧಾನಸಭೆಯಲ್ಲಿ ತಿಳಿಸಿದರು.

ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಲಿ ಅವರು ತಾಲೂಕುಗಳಲ್ಲಿ ಗ್ರಾಮ ಲೆಕ್ಕಾಧಿಕಾರಿಗಳೂ ಸೇರಿದಂತೆ ಕಂದಾಯ ಇಲಾಖೆಯ ವಿವಿಧ ಹಂತದ ನೌಕರರನ್ನು ಬೇರೆಡೆ ನಿಯೋಜನೆಗೊಳಿಸಲಾಗುತ್ತಿದೆ ಸಿಬ್ಬಂದಿ ಕೊರತೆಯಿಂದಾಗಿ ಕಂದಾಯ ಇಲಾಖೆಯಲ್ಲಿ ಜನರಿಗೆ ಸರಿಯಾದ ಸಮಯಕ್ಕೆ ಕೆಲಸವಾಗುತ್ತಿಲ್ಲ ಎಂಬ ಪ್ರಶ್ನೆಗೆ ಸಚಿವ ಕೃಷ್ಣೇಬೈರೆಗೌಡ ಉತ್ತರಿಸಿದರು

ನಿಮ್ಮ ಪರ ನಾವಿದ್ದೇವೆ. ಇದರಲ್ಲಿ ಯಾವುದೂ ರಾಜಕೀಯ ಇಲ್ಲ ಕುಂದಾಪುರ ತಾಲೋಕಿನ ಕಂದಾಯ ಇಲಾಖೆಯಲ್ಲಿ 110 ಹುದ್ದೆಗಳ ಪೈಕಿ 70 ಹುದ್ದೆಗಳನ್ನು ಈಗಾಗಲೇ ಭರ್ತಿ ಮಾಡಲಾಗಿದೆ. ಅಂದರೆ, ಶೇ.65ರಷ್ಟು ಮಾಡಲಾಗಿದೆ. ಉಳಿದ ಸ್ಥಾನಗಳನ್ನೂ ಶೀಘ್ರದಲ್ಲೇ ಭರ್ತಿ ಮಾಡಲಾಗುವುದು ಎಂದು ಭರವಸೆ ನೀಡಿದರು. ಬೇರೆ ಇಲಾಖೆಗೆ ಹೊಲಿಸಿದರೆ ಕಂದಾಯ ಇಲಾಖೆಯಲ್ಲಿ ನೌಕರರ ಸಂಖ್ಯೆ ಅಧಿಕವಿದೆ. ಅಲ್ಲದೆ, ಸಾರ್ವಜನಿಕರಿಗೆ ಶೀಘ್ರ ಸೇವೆ ನೀಡುವ ಉದ್ದೇಶಿದಿಂದ ಶೀಘ್ರದಲ್ಲೇ 1000 ಗ್ರಾಮ ಲೆಕ್ಕಾಧಿಕಾರಿಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು. ಮುಖ್ಯಮಂತ್ರಿ ಸಿದ್ದರಾಮಯ್ಯನವರೂ ಗ್ರಾಮ ಲೆಕ್ಕಾಧಿಕಾರಿಗಳ ನೇಮಕಾತಿಗೆ ಹಸಿರು ನಿಶಾನೆ ನೀಡಿದ್ದಾರೆ ಎಂದರು

   

Related Articles

error: Content is protected !!