ಮಂಗಳೂರು : ವಿಶ್ವ ಹಿಂದು ಪರಿಷತ್ತಿನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮಿಲಿಂದ್ ಪರಾಂಡೆ ಅವರು ಇಂದು ಜುಲೈ 7ರಂದು ಮಂಗಳೂರಿಗೆ ಆಗಮಿಸಲಿದ್ದಾರೆ. ಶಕ್ತಿನಗರದ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ನಡೆಯುವ ವಿಶ್ವ ಹಿಂದು ಪರಿಷತ್ತಿನ ವಿಭಾಗ ಪದಾಧಿಕಾರಿಗಳ ಅಭ್ಯಾಸವರ್ಗದಲ್ಲಿ ಮಾರ್ಗದರ್ಶನ ನೀಡಲಿದ್ದಾರೆ. ಸಂಜೆ ಶಕ್ತಿ ವಸತಿ ಶಾಲೆಯಲ್ಲಿ ಮಂಗಳೂರಿನ ವಿವಿಧ ಕ್ಷೇತ್ರಗಳ ಗಣ್ಯರೊಂದಿಗೆ ಸಂವಾದ ಸಭೆ ಮತ್ತು ಶಕ್ತಿ ಕಾಲೇಜಿನ ವಿದ್ಯಾರ್ಥಿಗಳಿಗೆ ‘ಭಾರತವನ್ನು ವಿಶ್ವ ಗುರುವಾಗಿ ನಿರ್ಮಿಸುವಲ್ಲಿ ಯುವಕರ ಪಾತ್ರ’ ವಿಷಯದ ಬಗ್ಗೆ ಉಪನ್ಯಾಸ ನೀಡಲಿದ್ದಾರೆ ಎಂದು ವಿಹಿಂಪ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.