ಉಡುಪಿ: ಇಲ್ಲಿನ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಆಶ್ರಯದಲ್ಲಿ ರಾಷ್ಠಕವಿ ಕುವೆಂಪು ಅವರ ಜಯಂತಿ ಪ್ರಯುಕ್ತ ವಿಶ್ವ ಮಾನವ ದಿನಾಚರಣೆ ಕಾರ್ಯಕ್ರಮವು ಡಿ.29ರಂದು ಬೆಳಗ್ಗೆ 10 ಗಂಟೆಗೆ ನಗರದ ಸರಕಾರಿ ಬಾಲಕಿಯರ ಪ್ರೌಢಶಾಲಾ ಸಭಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ರಾಜ್ಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಉದ್ಘಾಟಿಸಲಿದ್ದು, ಶಾಸಕ ಯಶ್‌ಪಾಲ್ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ, ಸಂಸದ ಬಿ.ವೈ. ರಾಘವೇಂದ್ರ, ಶಾಸಕರುಗಳಾದ ವಿ ಸುನಿಲ್ ಕುಮಾರ್, ಗುರುರಾಜ್ ಗಂಟಿಹೊಳೆ, ಎ ಕಿರಣ್ ಕುಮಾರ್ ಕೊಡ್ಡಿ ಹಾಗೂ ಗುರ್ಮ ಸುರೇಶ್ ಶೆಟ್ಟಿ ವಿ.ಪ.ನಾಯಕರಾದ ಕೋಟ ಶ್ರೀನಿವಾಸ ಪೂಜಾರಿ, ಎಸ್.ಎಲ್. ಭೋಜೆಗೌಡ, ಡಾ.ತೇಜಸ್ವಿನಿ ಗೌಡ ಹಾಗೂ ಮಂಜುನಾಥ ಭಂಡಾರಿ, ಡಾ. ಎಂ.ಟಿ. ರೇಜು, ನೀಲಾವರ ಸುರೇಂದ್ರ ಅಡಿಗ, ಇಂದಿರಾ ಬಿ. ಹಾಗೂ ಮತ್ತಿತರರು ಭಾಗವಹಿಸಲಿದ್ದು, ಶ್ರೀ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜು ಕನ್ನಡ ವಿಭಾಗ ಮುಖ್ಯಸ್ಥೆ ಡಾ. ಪ್ರಜ್ಞಾ ಮಾರ್ಪಳ್ಳಿ ಉಪನ್ಯಾಸ ನೀಡಲಿದ್ದಾರೆ