Home » ವಿಶ್ವ ವಿನಾಯಕ ಸಿ.ಬಿ.ಎಸ್.ಇ ಸ್ಕೂಲ್ : ವಿಶ್ವ ಪರಿಸರ ದಿನಾಚರಣೆ
 

ವಿಶ್ವ ವಿನಾಯಕ ಸಿ.ಬಿ.ಎಸ್.ಇ ಸ್ಕೂಲ್ : ವಿಶ್ವ ಪರಿಸರ ದಿನಾಚರಣೆ

by Kundapur Xpress
Spread the love

ತೆಕ್ಕಟ್ಟೆ : ಜೂನ್ 05 ವಿಶ್ವ ವಿನಾಯಕ ಸಿ.ಬಿ.ಎಸ್.ಇ ಸ್ಕೂಲ್‌ನಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ವಿವಿಧ ಗಿಡಗಳನ್ನು ನೆಡುವುದರ ಮೂಲಕ ಪರಿಸರ ಸಂರಕ್ಷಣೆಯ ಕುರಿತು ಜಾಗೃತಿ ಮೂಡಿಸಿದರು.

ಶಾಲಾ ಮೇನೆಂಜಿಂಗ್ ಡೈರೆಕ್ಟರ್ ಶ್ರೀ ಎಂ. ಪ್ರಭಾಕರ ಶೆಟ್ಟಿಯವರು ಮಾತನಾಡಿ ಪ್ರತಿಯೊಬ್ಬರೂ ಗಿಡಗಳನ್ನು ನೆಟ್ಟು ಪ್ರಕೃತಿಯನ್ನು ಪೋಷಿಸಿದರೆ ಮಾತ್ರ ಹಸಿರನ್ನು ಉಳಿಸಿ ಜೀವ ಸಂಕುಲದ ರಕ್ಷಣೆ ಸಾಧ್ಯ ಎಂದು ತಿಳಿಸಿದರು.

ಶಾಲಾ ಪ್ರಾಂಶುಪಾಲರಾದ ಶ್ರೀ ನಿತಿನ್ ಡಿ’ ಆಲ್ಮೇಡಾರವರು ಮಾತನಾಡಿ ಸಸ್ಯ ಸಂಪತ್ತನ್ನು ಬೆಳೆಸಿ ಪರಿಸರವನ್ನು ಸಂರಕ್ಷಿಸುವುದು ಪ್ರತಿಯೊಬ್ಬರ ಜವಬ್ದಾರಿಯಾಗಿದೆ ಎಂದು ತಿಳಿಸಿದರು. ವಿದ್ಯಾರ್ಥಿಗಳು ತಂದ ವಿವಿಧ ಗಿಡಗಳನ್ನು ಶಾಲಾ ವಠಾರದಲ್ಲಿ ನೆಡುವುದರ ಮೂಲಕ ಪರಿಸರದ ಕುರಿತು ಜಾಗೃತಿಯನ್ನು ಮೂಡಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

 

Related Articles

error: Content is protected !!