ತೆಕ್ಕಟ್ಟೆ : ಜನವರಿ 76 ನೇ ಗಣರಾಜ್ಯೋತ್ಸವದ ಪ್ರಯುಕ್ತ ವಿಶ್ವ ವಿನಾಯಕ ಆಂಗ್ಲ ಮಾದ್ಯಮ ಶಾಲೆಯಲ್ಲಿ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಲಾಯಿತು. ಶಾಲಾ ಮ್ಯಾನೇಜಿಂಗ್ ಡೈರೆಕ್ಟರ್ ಶ್ರೀ ಪ್ರಭಾಕರ ಶೆಟ್ಟಿಯವರು ಧ್ವಜಾರೋಹಣ ನೆರವೇರಿಸಿ ಡಾ. ಬಿ.ಆರ್. ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಪುಷ್ಪ ನಮನಗಳನ್ನು ಸಲ್ಲಿಸಿ ಸಂವಿಧಾನದ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು
ಕಾರ್ಯಕ್ರಮದಲ್ಲಿ ಶಾಲಾ ಅಕಾಡೆಮಿಕ್ ಡೈರೆಕ್ಟರ್ ದಿವಾಕರ ಶೆಟ್ಟಿ ಹೆಚ್, ಪ್ರಾಂಶುಪಾಲರು, ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಶಿಕ್ಷಕೇತರ ಸಿಬ್ಬಂದಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ರಾಜ್ಯಮಟ್ಟದ ಯುವ ಕವಿಗೋಷ್ಠಿಯಲ್ಲಿ ಭಾಗವಹಿಸಿದ 7ನೇ ತರಗತಿ ವಿದ್ಯಾರ್ಥಿ ಅವನೀಶ್ ಐತಾಳ್‌ರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು.
ಶಿಕ್ಷಕಿ ಸಂದ್ಯಾ ಆಚಾರ್ಯ ಗಣರಾಜ್ಯೋತ್ಸವದ ಕುರಿತು ಭಾಷಣ ಮಾಡಿದರು. ವಿದ್ಯಾರ್ಥಿಗಳಾದ ಶ್ರೀಯಾ, ಹರ್ಷಿಣಿ, ಯಕ್ಷತ್ ಶೆಟ್ಟಿ ಹಾಗೂ ಸಾನಿಕ ಭಾಷಣವನ್ನು ಮಾಡಿದರು, ತೃಪ್ತಿ ಸ್ವಾಗತಿಸಿದರು, ಶ್ರೀಷ್ಮಾ ವಂದಿಸಿದರು, ತಾರುಣ್ಯ ಕಾರ್ಯಕ್ರಮ ನಿರೂಪಿಸಿದರು.
ಶಿಕ್ಷಕಿಯರಾದ ಸುಷ್ಮಾ ಆರ್, ರೇಣುಕಾ ಹಾಗೂ ಶ್ವೇತಾ ಕಾರ್ಯಕ್ರಮ ಸಂಘಟಿಸಿದರು.

