Home » ವಿಶ್ವ ವಿನಾಯಕ : 77ನೇ ಗಣರಾಜ್ಯೋತ್ಸವದ ಸಂಭ್ರಮ
 

ವಿಶ್ವ ವಿನಾಯಕ : 77ನೇ ಗಣರಾಜ್ಯೋತ್ಸವದ ಸಂಭ್ರಮ

by Kundapur Xpress
Spread the love

ತೆಕ್ಕಟ್ಟೆ : ಗಣರಾಜ್ಯೋತ್ಸವದ ಪ್ರಯುಕ್ತ ವಿಶ್ವ ವಿನಾಯಕ ಆಂಗ್ಲ ಮಾದ್ಯಮ ಶಾಲೆಯಲ್ಲಿ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಲಾಯಿತು. ಶಾಲಾ ಮ್ಯಾನೇಜಿಂಗ್ ಡೈರೆಕ್ಟರ್ ಎಮ್. ಪ್ರಭಾಕರ ಶೆಟ್ಟಿಯವರು ಧ್ವಜಾರೋಹಣ ನೆರವೇರಿಸಿ ಡಾ. ಬಿ.ಆರ್. ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಪುಷ್ಪ ನಮನಗಳನ್ನು ಸಲ್ಲಿಸಿ ಸಂವಿಧಾನದ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿ ಹೇಳಿದರು.
ಕರ‍್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲರು, ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಶಿಕ್ಷಕೇತರ ಸಿಬ್ಬಂದಿ ಉಪಸ್ಥಿತರಿದ್ದರು.
ಶಿಕ್ಷಕಿ ಅನುಷಾ ಚಂದನ್‌ರವರು ಗಣರಾಜ್ಯೋತ್ಸವದ ಕುರಿತು ಭಾಷಣ ಮಾಡಿದರು. ವಿದ್ಯಾರ್ಥಿಗಳಾದ ನವಮಿ, ವಾಸವಿ, ಮುಶಿಲ್ ಹಾಗೂ ಆಕಾಂಕ್ಷ ಭಾಷಣವನ್ನು ಮಾಡಿದರು. ಅವನಿ ಶೆಟ್ಟಿ ಸ್ವಾಗತಿಸಿದರು, ಪ್ರಣೀತಾ ವಂದಿಸಿದರು, ಸಾನಿಕ ಕರ‍್ಯಕ್ರಮ ನಿರೂಪಿಸಿದರು.
ಶಿಕ್ಷಕಿಯರಾದ ಸುಷ್ಮಾ ಆರ್. ಹಾಗೂ ಜಯಶ್ರೀ ಶೆಟ್ಟಿ ಕಾರ್ಯಕ್ರಮ ಸಂಘಟಿಸಿದರು.

 

Related Articles

error: Content is protected !!