Home » ವಿಶ್ವ ವಿನಾಯಕ ಸಿ.ಬಿ.ಎಸ್.ಇ. ಸ್ಕೂಲ್ : ಜಿಲ್ಲಾಮಟ್ಟದಲ್ಲಿ ದ್ವಿತೀಯ ಸ್ಥಾನ
 

ವಿಶ್ವ ವಿನಾಯಕ ಸಿ.ಬಿ.ಎಸ್.ಇ. ಸ್ಕೂಲ್ : ಜಿಲ್ಲಾಮಟ್ಟದಲ್ಲಿ ದ್ವಿತೀಯ ಸ್ಥಾನ

by Kundapur Xpress
Spread the love

ತೆಕ್ಕಟ್ಟೆ : ಉಡುಪಿ ಜಿಲ್ಲಾ ಮಟ್ಟದ ಸಿ.ಬಿ.ಎಸ್.ಇ. ಹಾಗೂ ಐ.ಸಿ.ಎಸ್‌.ಇ. ಶಾಲೆಗಳ ಜಂಟಿ ಆಶ್ರಯದಲ್ಲಿ ವಿದ್ಯೋದಯ ಪಬ್ಲಿಕ್ ಸ್ಕೂಲ್ ಉಡುಪಿಯಲ್ಲಿ ನಡೆದ ರಾಗ್-ರಂಗ್ 2025 ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ “ಟ್ರಾಶ್ ಟು ಟ್ರೆಜರ್ ಫ್ಯಾನ್ಸಿ ಡ್ರೆಸ್” ಸ್ಪರ್ಧೆಯಲ್ಲಿ ವಿಶ್ವವಿನಾಯಕ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಹರ್ಷಿಣಿ ದ್ವಿತೀಯ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿರುತ್ತಾರೆ. ಇವರಿಗೆ ಶಾಲಾ ಮ್ಯಾನೇಜಿಂಗ್ ಡೈರೆಕ್ಟರ್ ಎಮ್. ಪ್ರಭಾಕರ್ ಶೆಟ್ಟಿಯವರು ಬಹುಮಾನ ವಿತರಿಸಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಶಾಲಾ ಪ್ರಾಂಶುಪಾಲರಾದ ನಿತಿನ್ ಡಿ’ ಆಲ್ಮೇಡಾ, ಶಿಕ್ಷಕರು, ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

 

Related Articles

error: Content is protected !!