Home » ವಿಶ್ವ ವಿನಾಯಕ ಸ್ಕೂಲ್‌ : ವಿಜ್ಞಾನ ಮಾದರಿಗಳ ಪ್ರದರ್ಶನ
 

ವಿಶ್ವ ವಿನಾಯಕ ಸ್ಕೂಲ್‌ : ವಿಜ್ಞಾನ ಮಾದರಿಗಳ ಪ್ರದರ್ಶನ

by Kundapur Xpress
Spread the love

ತೆಕ್ಕಟ್ಟೆ : ವಿಶ್ವ ವಿನಾಯಕ ಸಿ.ಬಿ.ಎಸ್.ಇ ಸ್ಕೂಲ್ ತೆಕ್ಕಟ್ಟೆಯಲ್ಲಿ ಕೋಡಿಂಗ್ ಮತ್ತು ರೊಬೊಟಿಕ್ಸ್ ತತ್ವದ ಆಧಾರದಲ್ಲಿ ತಯಾರಿಸಿದ ಎಲೆಕ್ಟ್ರಾನಿಕ್ ವಿಜ್ಞಾನ ಮಾದರಿಗಳ ಪ್ರದರ್ಶನವನ್ನು ಏರ್ಪಡಿಸಲಾಯಿತು. ಐದನೇ ತರಗತಿಯಿಂದ ಒಂಭತ್ತನೇ ತರಗತಿಯ ವಿದ್ಯಾರ್ಥಿಗಳು ಒಟ್ಟು 40 ವಿಜ್ಞಾನ ಮಾದರಿಗಳನ್ನು ತಯಾರಿಸಿ ಪ್ರದರ್ಶನ ಮಾಡಿದರು. ಶಾಲಾ ಮ್ಯಾನೇಜಿಂಗ್ ಡೈರೆಕ್ಟರ್ ವಿದ್ಯಾರ್ಥಿಗಳ ಸಂಶೋಧನಾ ಮನೋಭಾವವನ್ನು ಪ್ರಶಂಸಿಸಿ ಶಿಕ್ಷಕ ಹಾಗೂ ಪೋಷಕರ ಸಹಕಾರದಿಂದ ವಿದ್ಯಾರ್ಥಿಗಳು ಸಾಧನೆಯನ್ನು ಮಾಡಬಹುದು ಎಂದು ತಿಳಿಸಿದರು.

ಶಾಲಾ ಪ್ರಾಂಶುಪಾಲ ನಿತಿನ್ ಡಿ’ ಆಲ್ಮೇಡಾ ಮಾತನಾಡಿ ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಕೋಡಿಂಗ್ ಹಾಗೂ ರೊಬೊಟಿಕ್ಸ್ ತಂತ್ರಜ್ಞಾನದ ಕಲಿಕೆ ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಪೂರಕವಾಗಿದೆ ಎಂದು ತಿಳಿಸಿದರು.

ವಿಜ್ಞಾನ ಮಾದರಿ ಪ್ರದರ್ಶನವನ್ನು ಪೋಷಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ತೆರೆದಿಡಲಾಗಿತ್ತು. ಕಾರ‍್ಯಕ್ರಮದಲ್ಲಿ ಶಾಲಾ ಮ್ಯಾನೇಜಿಂಗ್ ಡೈರೆಕ್ಟರ್ ಎಮ್ ಪ್ರಭಾಕರ ಶೆಟ್ಟಿ, ಶಾಲಾ ಪ್ರಾಂಶುಪಾಲ ನಿತಿನ್ ಡಿ ಆಲ್ಮೇಡಾ, ಪೋಷಕರು, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಶಾಲಾ ಸಿಬ್ಬಂದಿಯವರು ಉಪಸ್ಥಿತರಿದ್ದರು.

ವಿದ್ಯಾರ್ಥಿಗಳ ಟಿಂಕರ್ ಸ್ಪೇಸ್ ಸಂಸ್ಥೆಯ ತರಭೇತುದಾರರಾದ ಪ್ರಣಮ್ ಆಚಾರ್ಯ, ಸಮರ್ಥ್, ಮತ್ತು ಗಿರೀಶ್ ರವರ ಮಾರ್ಗದರ್ಶನದಲ್ಲಿ ವಿವಿಧ ವಿಜ್ಞಾನ ಮಾದರಿಗಳನ್ನು ತಯಾರಿಸಿ ಪ್ರದರ್ಶನ ಮಾಡಿದರು

 

Related Articles

error: Content is protected !!