186
ತೆಕ್ಕಟ್ಟೆ : ವಿಶ್ವ ವಿನಾಯಕ ಸಿ.ಬಿ.ಎಸ್.ಇ ಸ್ಕೂಲ್ ತೆಕ್ಕಟ್ಟೆಯಲ್ಲಿ ಮಾದಕ ವ್ಯಸನ ಮುಕ್ತ ದಿನಾಚರಣೆಯನ್ನು ಆಚರಿಸಲಾಯಿತು. ಶಾಲಾ ಮ್ಯಾನೇಜಿಂಗ್ ಡೈರೆಕ್ಟರ್ ಎಮ್. ಪ್ರಭಾಕರ ಶೆಟ್ಟಿಯವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಇಂದಿನ ಯುವ ಪೀಳಿಗೆಯು ಮಾದಕ ವ್ಯಸನದಿಂದ ದೂರವಿದ್ದು ತಮ್ಮ ಅಮೂಲ್ಯ ಭವಿಷ್ಯವನ್ನು ರೂಪಿಸಿಕೊಳ್ಳಬೇಕೆಂದು ತಿಳಿಸಿದರು.
ಶಾಲಾ ಪ್ರಾಂಶುಪಾಲ ನಿತಿನ್ ಡಿ ಅಲ್ಮೇಡಾರವರು ಮಾದಕ ವ್ಯಸನದ ಬಗ್ಗೆ ವಿವರಿಸಿದರು. ವಿವಿಧ ಮಾದಕ ಪದಾರ್ಥಗಳ ಕುರಿತು ತಿಳಿಸಿ ಅದರ ಸೇವನೆಯಿಂದ ಮನುಷ್ಯನ ಮೆದುಳಿನ ಮೇಲಾಗುವ ಪರಿಣಾಮ ಹಾಗೂ ಅನಾಹುತಗಳ ಬಗ್ಗೆ ನಿದರ್ಶನಗಳೊಂದಿಗೆ ವಿವರಿಸಿದರು. ವಿದ್ಯಾರ್ಥಿಗಳು ಇಂತಹ ಮಾದಕ ವಸ್ತುಗಳ ಕುರಿತು ಅರಿವನ್ನು ಹೊಂದಿದ್ದು ಅದರಿಂದ ದೂರವಿರಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಸಿಬಂದಿ ವರ್ಗದವರು ಉಪಸ್ಥಿತರಿದ್ದರು. ಪ್ರಾಂಶುಪಾಲ ನಿತಿನ್ ಡಿ’ ಅಲ್ಮೇಡಾ ಕಾರ್ಯಕ್ರಮ ನಿರೂಪಿಸಿದರು.

