ತೆಕ್ಕಟ್ಟೆ : ವಿಶ್ವವಿನಾಯಕ ಸಿ.ಬಿ.ಎಸ್‌ಇ ಸ್ಕೂಲ್ ತೆಕ್ಕಟ್ಟೆ ಇಲ್ಲಿನ ಫ್ಲೇ ಸ್ಕೂಲ್, ಎಲ್.ಕೆಜಿ ಹಾಗೂ ಯು.ಕೆ.ಜಿ. ಮಕ್ಕಳಿಗೆ ಮಾನ್ಸೂನ್ ಫೆಸ್ಟ್ ಹಾಗೂ ಬ್ಲೂ ಕಲರ್ ಡೇ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ವಿದ್ಯಾರ್ಥಿಗಳು ಮಳೆಗಾಲಕ್ಕೆ ಸಂಬಂಧಿಸಿದ ವಿವಿಧ ಚಟುವಟಿಕೆಗಳನ್ನು ಮಾಡಿ ಆನಂದಿಸಿದರು. ಪೇಪರ್ ಬೋಟ್ ಹಾಗೂ ನೃತ್ಯಗಳನ್ನು ಮಾಡಿ ಮಳೆಗಾಲದ ಆಟಗಳ ಮಹತ್ವವನ್ನು ಅರಿತುಕೊಂಡರು. ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ನೀಲಿ ಬಣ್ಣದ ಉಡುಗೆಗಳನ್ನು ತೊಟ್ಟು ಸಂಭ್ರಮಿಸಿದರು. ತರಗತಿ ಕೋಣೆಗಳನ್ನು ನೀಲಿ ಬಣ್ಣದ ಅಲಂಕಾರಿಕ ವಸ್ತುಗಳಿಂದ ಅಲಂಕರಿಸಲಾಯಿತು
ಮಕ್ಕಳಿಗೆ ವಿವಿಧ ಬಣ್ಣಗಳ ಅರಿವು ಮೂಡಿಸುವ ಉದ್ದೇಶದಿಂದ ಪ್ರತೀ ತಿಂಗಳಿಗೊಮ್ಮೆ ವಿವಿಧ ಬಣ್ಣಗಳಿಗೆ ಸಂಬಂಧಿಸಿದ ಕಾರ್ಯಕ್ರಮ ಹಾಗೂ ಚಟುವಟಿಕೆಗಳನ್ನು ಆಯೋಜಿಸಿ ಮಕ್ಕಳಲ್ಲಿ ಸೃಜನಾತಮಕ ಕಲಿಕೆಗೆ ಒತ್ತು ನೀಡಲಾಗುತ್ತದೆ. ಕಾರ್ಯಕ್ರಮದಲ್ಲಿ ಶಾಲಾ ಮ್ಯಾನೇಜಿಂಗ್ ಡೈರೆಕ್ಟರ್ ಎಮ್. ಪ್ರಭಾಕರ ಶೆಟ್ಟಿ, ಪ್ರಾಂಶುಪಾಲ ನಿತಿನ್ ಡಿ’ ಆಲ್ಮೇಡಾ, ಶಿಕ್ಷಕರು ಹಾಗೂ ಶಾಲಾ ಸಿಬ್ಬಂಧಿಯವರು ಉಪಸ್ಥಿತರಿದ್ದರು. ಕೆ.ಜಿ ವಿಭಾಗದ ಸಂಯೋಜಕಿ ವಿಲಾಸಿನಿ ಶೆಟ್ಟಿ ಕಾರ್ಯಕ್ರಮ ಸಂಘಟಿಸಿದರು.

