ತೆಕ್ಕಟ್ಟೆ: ನವೆಂಬರ್ 1 ಕನ್ನಡ ರಾಜ್ಯೋತ್ಸವದ ಪ್ರಯುಕ್ತ ವಿಶ್ವವಿನಾಯಕ ಸಿ. ಬಿ. ಎಸ್.ಇ. ಶಾಲೆ ತೆಕ್ಕಟ್ಟೆಯಲ್ಲಿ ಧ್ವಜಾರೋಹಣವನ್ನು ನಡೆಸಿ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು.ಶಾಲಾ ಮ್ಯಾನೇಜಿಂಗ್ ಡೈರೆಕ್ಟರ್ ಎಮ್. ಪ್ರಭಾಕರ್ ಶೆಟ್ಟಿಯವರು ದೀಪ ಬೆಳಗಿಸಿ ಕನ್ನಡಾಂಬೆಗೆ ಪುಷ್ಪ ನಮನಗಳನ್ನು ಸಲ್ಲಿಸಿ ಕನ್ನಡ ರಾಜ್ಯೋತ್ಸವದ ಶುಭ ಹಾರೈಸಿದರು. ಕನ್ನಡ ನಾಡು-ನುಡಿ, ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಪ್ರತಿಯೊಬ್ಬ ಕನ್ನಡಿಗರು ಶ್ರಮಿಸಬೇಕೆಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಕನ್ನಡ ಅಧ್ಯಾಪಕರಾದ ಪ್ರತಿಮಾ ಹಾಗೂ ರಾಘವೇಂದ್ರರವರು ಕನ್ನಡ ರಾಜ್ಯೋತ್ಸವದ ಕುರಿತು ಭಾಷಣ ಮಾಡಿದರು. ವಿದ್ಯಾರ್ಥಿಗಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿದರು.
ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಸಭಾ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಿ ಸನ್ಮಾನಿಸಲಾಯಿತು.
ಎಂಟನೇ ತರಗತಿ ವಿದ್ಯಾರ್ಥಿಗಳಾದ ಯುಕ್ತಿ ಶೆಟ್ಟಿ ಹಾಗೂ ಯುಗ ಶೆಟ್ಟಿ ಇವರು ರಾಜ್ಯಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಕ್ರಮವಾಗಿ ಪ್ರಥಮ ಹಾಗೂ ಚತುರ್ಥ ಸ್ಥಾನ ಗಳಿಸಿ ಬಹುಮಾನ ಪಡೆದರು. ಟಾಟಾ ಬಿಲ್ಡಿಂಗ್ ಇಂಡಿಯಾ ಇವರು ನಡೆಸಿದ ಪ್ರಬಂಧ ಸ್ಪರ್ಧೆಯಲ್ಲಿ ಹಿರಿಯರ ವಿಭಾಗದಲ್ಲಿ ಸನ್ನಿಧಿ, ನವಮಿ ಹಾಗೂ ತಾರುಣ್ಯ ಇವರು ಕ್ರಮವಾಗಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನವನ್ನು ಗಳಿಸಿದರು. ಕಿರಿಯರ ವಿಭಾಗದಲ್ಲಿ ಶ್ರೀಯಾ, ಆಯುಷ್ ಹಾಗೂ ಹನಿ ಶೆಟ್ಟಿ ಇವರು ಕ್ರಮವಾಗಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನವನ್ನು ಗಳಿಸಿದರು. ವಿಜೇತ ವಿದ್ಯಾರ್ಥಿಗಳಿಗೆ ಸಭಾ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಿ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಶಾಲಾ ಮ್ಯಾನೇಜಿಂಗ್ ಡೈರೆಕ್ಟರ್ ಎಮ್. ಪ್ರಭಾಕರ್ ಶೆಟ್ಟಿ, ಪ್ರಾಂಶುಪಾಲ ನಿತಿನ್ ಡಿ ಆಲ್ಮೇಡಾ, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಶಾಲಾ ಸಿಬ್ಬಂದಿಯವರು ಉಪಸ್ಥಿತರಿದ್ದರು.

