ಕೈಗಾರಿಕಾ ಭೇಟಿ - ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಜ್ಞಾನ

by Kundapur Xpress
Spread the love

ತೆಕ್ಕಟ್ಟೆ  : ವಿಶ್ವವಿನಾಯಕ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಹಾಗೂ ಪಿಯು ಕಾಲೇಜಿನ ವಿದ್ಯಾರ್ಥಿಗಳಿಗೆ ಕೈಗಾರಿಕೆಗಳ ಕಾರ್ಯವೈಖರಿ ಹಾಗೂ ಉತ್ಪಾದನಾ ಪ್ರಕ್ರಿಯೆಯ ಬಗ್ಗೆ ಪ್ರಾಯೋಗಿಕ ಜ್ಞಾನ ನೀಡುವ ಉದ್ದೇಶದಿಂದ ಕೈಗಾರಿಕಾ ಭೇಟಿಯನ್ನು ಆಯೋಜಿಸಲಾಗಿತ್ತು.
ಶಾಲಾ ಕಾಲೇಜಿನ ಶಿಕ್ಷಕರು ಮತ್ತು ಉಪನ್ಯಾಸಕರ ನೇತೃತ್ವದಲ್ಲಿ ವಿದ್ಯಾರ್ಥಿಗಳು “ನವದುರ್ಗ ಆಹಾರ ಉತ್ಪನ್ನಗಳ ಖಾಸಗಿ ನಿಯಮಿತ ಸಂಸ್ಥೆ “ಪಡುಬಿದ್ರಿ, ಇಲ್ಲಿಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಕೈಗಾರಿಕೆಯಲ್ಲಿ ನಡೆಯುವ ವಿವಿಧ ಹಂತಗಳ ಉತ್ಪಾದನಾ ಪ್ರಕ್ರಿಯೆ, ಯಂತ್ರೋಪಕರಣಗಳ ಬಳಕೆ, ಕಾರ್ಮಿಕರ ಕಾರ್ಯವಿಧಾನ, ಸುರಕ್ಷತಾ ಕ್ರಮಗಳು ಹಾಗೂ ಉತ್ಪನ್ನಗಳ ಗುಣಮಟ್ಟ ಪರಿಶೀಲನೆಯ ಕುರಿತು ಅಧಿಕಾರಿಗಳು ವಿವರಿಸಿದರು.
ವಿದ್ಯಾರ್ಥಿಗಳು ವಿವಿಧ ಯಂತ್ರೋಪಕರಣಗಳ ಕಾರ್ಯನಿರ್ವಹಣೆಯನ್ನು ವೀಕ್ಷಿಸಿ, ತಮ್ಮಲ್ಲಿದ್ದ ಸಂದೇಹಗಳನ್ನು ಕೇಳಿ ಪರಿಹರಿಸಿಕೊಂಡರು. ಈ ಭೇಟಿಯು ವಿದ್ಯಾರ್ಥಿಗಳಿಗೆ ಪಠ್ಯ ಜ್ಞಾನದ ಜೊತೆಗೆ ಪ್ರಾಯೋಗಿಕ ಅನುಭವವನ್ನು ನೀಡಿತು.
ಕಾರ್ಯಕ್ರಮದಲ್ಲಿ ಶಾಲಾ-ಕಾಲೇಜಿನ ವಿದ್ಯಾರ್ಥಿಗಳು, ಶಿಕ್ಷಕರು, ಉಪನ್ಯಾಸಕರು ಹಾಗೂ ವಿಶ್ವವಿನಾಯಕ ವಿದ್ಯಾ ಸಂಸ್ಥೆಗಳ ಆಡಳಿತ ನಿರ್ದೇಶಕ ಶ್ರೀಯುತ ಹರೀಶ್ ಮರವಂತೆ ಉಪಸ್ಥಿತರಿದ್ದರು.

 

Related Articles

error: Content is protected !!