ವಿಶ್ವ ವಿನಾಯಕ ನ್ಯಾಷನಲ್ ಆಂಗ್ಲ ಮಾಧ್ಯಮ ಶಾಲೆ ಹಾಗೂ ಪಿ.ಯು. ಕಾಲೇಜಿನಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿವಿಧ ಸ್ಪರ್ಧೆಗಳು

by Kundapur Xpress
Spread the love

ತೆಕ್ಕಟ್ಟೆ : ವಿಶ್ವ ವಿನಾಯಕ ನ್ಯಾಷನಲ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಸಂಭ್ರಮದಿಂದ ಆಚರಿಸಲಾಯಿತು.

ಶಾಲಾ ಪ್ರಾಂಶುಪಾಲರಾದ ಶ್ರೀಯುತ ಸಂದೀಪ್ ಪುತ್ರನ್ ಹಾಗೂ ಶಾಲಾ ಆಡಳಿತ ನಿರ್ದೇಶಕರಾದ ಶ್ರೀಯುತ ಹರೀಶ್ ಮರಾವಂತೆ ಅವರ ಮಾರ್ಗದರ್ಶನದಲ್ಲಿ, ಪೂರ್ವ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಪೂರ್ವ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳು ಶ್ರೀ ಕೃಷ್ಣ ಹಾಗೂ ರಾಧೆಯ ವೇಷಭೂಷಣ ಧರಿಸಿ ನೃತ್ಯ ಪ್ರದರ್ಶಿಸುವ ಮೂಲಕ ಎಲ್ಲರ ಗಮನ ಸೆಳೆದರು. ಪುಟ್ಟ ಮಕ್ಕಳು ಕೃಷ್ಣನ ಬಾಲಲೀಲೆಗಳನ್ನು ಪ್ರದರ್ಶಿಸಿ ಕಾರ್ಯಕ್ರಮಕ್ಕೆ ಮೆರುಗು ತಂದರು.

ಹಾಗೆಯೇ ಪ್ರಾಥಮಿಕ, ಪ್ರೌಢ ಹಾಗೂ ಪಿ.ಯು. ಕಾಲೇಜಿನ ವಿದ್ಯಾರ್ಥಿಗಳಿಗೆ ಮೊಸರು ಕುಡಿಕೆ ಒಡೆಯುವ ಸ್ಪರ್ಧೆ ಹಾಗೂ ಹಗ್ಗ ಜಗ್ಗಾಟ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಎಲ್ಲಾ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದರು.

ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ಹಾಗೂ ಪ್ರಮಾಣಪತ್ರಗಳನ್ನು ನೀಡಿ ಅಭಿನಂದಿಸಲಾಯಿತು.ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ಉತ್ಸಾಹಭರಿತ ಭಾಗವಹಿಸುವಿಕೆಯಿಂದ ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು.

 

Related Articles

error: Content is protected !!