ವಿಶ್ವ ವಿನಾಯಕ ವಿದ್ಯಾಸಂಸ್ಥೆಗಳಲ್ಲಿ ಶಿಕ್ಷಕರ ದಿನಾಚರಣೆಯ ಅದ್ದೂರಿ ಆಚರಣೆ.

by Kundapur Xpress
Spread the love

ತೆಕ್ಕಟ್ಟೆ : ವಿಶ್ವವಿನಾಯಕ ನ್ಯಾಶನಲ್ ಆಂಗ್ಲ ಮಾಧ್ಯಮ ಶಾಲೆ ಹಾಗೂ ಪಿ ಯು ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆಯನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು.
ಕಾರ್ಯಕ್ರಮವು ಪ್ರಾರ್ಥನೆಯೊಂದಿಗೆ ಆರಂಭವಾಗಿ ದೀಪ ಬೆಳಗಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ವಿದ್ಯಾರ್ಥಿಗಳು ಶಿಕ್ಷಕರ ಮಹತ್ವ ಅವರ ಸೇವೆ ಮತ್ತು ವಿದ್ಯಾರ್ಥಿಗಳ ಜೀವನ ರೂಪಿಸುವಲ್ಲಿ ಶಿಕ್ಷಕರ ಪಾತ್ರದ ಕುರಿತು ಭಾಷಣ ಮಾಡಿದರು.
ವಿದ್ಯಾರ್ಥಿಗಳು ಶಿಕ್ಷಕರಿಗೆ ಶುಭಾಶಯಗಳನ್ನು ಸಲ್ಲಿಸಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು. ಕೆಲವು ವಿದ್ಯಾರ್ಥಿಗಳು ಶಿಕ್ಷಕರ ಪಾತ್ರವನ್ನು ನಿರ್ವಹಿಸಿ ತರಗತಿಗಳನ್ನು ನಡೆಸುವ ಮೂಲಕ ವಿಶೇಷ ಅನುಭವ ಪಡೆದರು. ಶಿಕ್ಷಕರಿಗಾಗಿ ವಿವಿಧ ಆಟಗಳು ಮನೋರಂಜನಾ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.
ಈ ಸಂದರ್ಭದಲ್ಲಿ ಶಾಲೆಯ ಪ್ರಾಂಶುಪಾಲರು ಮಾತನಾಡಿ, ಶಿಕ್ಷಕರು ಕೇವಲ ಪಾಠ ಬೋದಿಸುವವರಲ್ಲಿ, ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವ ಮಾರ್ಗದರ್ಶಕರು ಎಂದು ಹೇಳಿದರು.
ಕಾರ್ಯಕ್ರಮದ ಕೊನೆಯಲ್ಲಿ ಶಿಕ್ಷಕರಿಗೆ ಗೌರವ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲರಾದ ಸಂದೀಪ್ ಪುತ್ರನ್, ಕಾಲೇಜಿನ ಪ್ರಾಂಶುಪಾಲರಾದ ಮನೋಜ್ ಕುಮಾರ್ ಆಡಳಿತ ನಿರ್ದೇಶಕರಾದ ಹರೀಶ್ ಮರವಂತೆ, ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕರು ಶಿಕ್ಷಕೇತರ ವರ್ಗದವರು ಉಪಸ್ಥಿತರಿದ್ದರು.

 

Related Articles

error: Content is protected !!