39
ಕಾಪು : ತಾಲೂಕು ಆಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಇವರ ಆಶ್ರಯದಲ್ಲಿ ಕಾಪು ಶ್ರೀ ಕಾಳಿಕಾಂಬ ದೇವಸ್ಥಾನದಲ್ಲಿ ಆಯೋಜಿಸಲಾದ ಕಾಪು ತಾಲೂಕು ಮಟ್ಟದ “ವಿಶ್ವಕರ್ಮ ಜಯಂತಿ ಆಚರಣೆ” ಕಾರ್ಯಕ್ರಮದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು.
ಈ ಸಂದರ್ಭದಲ್ಲಿ ಕಾಪು ಪುರಸಭೆಯ ಅಧ್ಯಕ್ಷರಾದ ಹರೀಣಾಕ್ಷಿ ದೇವಾಡಿಗ, ಉಪಾಧ್ಯಕ್ಷರಾದ ಸರೀತಾ ಶಿವಾನಂದ, ಕಾಪು ತಹಶೀಲ್ದಾರರಾದ ಪ್ರದೀಪ್ ಆರ್, ಕಾಪು ತಾಲೂಕು ಕಾರ್ಯನಿರ್ವಹಣಾಧಿಕಾರಿಗಳಾದ ಜೇಮ್ಸ್ ಡಿಸಿಲ್ವ ಹಾಗೂ ವಿಶ್ವಕರ್ಮ ಸಮಾಜದ ಮುಖಂಡರು, ಪ್ರಮುಖರು ಉಪಸ್ಥಿತರಿದ್ದರು.

