ಕುಂಭಾಸಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶನಿವಾರ ಕುಂಭಾಸಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ದೇವಳದ ಆಡಳಿತ ಮೊಕ್ತಸರ ಶ್ರೀರಮಣ ಉಪಾಧ್ಯಾಯ ಅವರು ಸಚಿವರನ್ನು ಬರಮಾಡಿಕೊಂಡು ಶ್ರೀ ದೇವರ ಪ್ರಸಾದ ನೀಡಿ ಗೌರವಿಸಿದರು. ಕುಂದಾಪುರ ಸಹಾಯಕ ಆಯುಕ್ತ ರಶ್ಮಿ ಎಸ್.ಆರ್., ತಹಸೀಲ್ದಾರ್ ಶೋಭಾಲಕ್ಷ್ಮೀ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು, ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ, ಮುಖಂಡರಾದ ದಿನೇಶ್ ಹೆಗ್ಡೆ ಮೊಳಹಳ್ಳಿ, ಮಲ್ಯಾಡಿ ಶಿವರಾಮ ಶೆಟ್ಟಿ, ರಾಜು ಪೂಜಾರಿ, ಅಶೋಕ್ ಪೂಜಾರಿ ಬೀಜಾಡಿ, ಕಿಶನ್ ಹೆಗ್ಡೆ ಕೊಳ್ಳೆಬೈಲು, ದೇವಕಿ ಸಣ್ಣಯ್ಯ, ವಿನೋದಾ ಕ್ರಾಸ್ತಾ, ನಾರಾಯಣ ಆಚಾರ್, ಅಣ್ಣಯ್ಯ ಪುತ್ರನ್ ಕುಂಭಾಸಿ, ರಮೇಶ್ ಶೆಟ್ಟಿ ವಕ್ವಾಡಿ ಮತ್ತಿತರರು ಸಚಿವರೊಂದಿಗಿದ್ದರು.
ವಿಶ್ರಾಂತ ಆಡಳಿತ ಧರ್ಮದರ್ಶಿ ชั. ಸೂರ್ಯನಾರಾಯಣ ಉಪಾಧ್ಯಾಯ, ಪರ್ಯಾಯ ಅರ್ಚಕರಾದ ಕೃಷ್ಣಾನಂದ ಉಪಾಧ್ಯಾಯ ಮತ್ತು ಸಹೋದರರು, ದೇವಳದ ಮ್ಯಾನೇಜರ್ ನಟೇಶ್ ಕಾರಂತ್, ಅರ್ಚಕ ಮಂಡಳಿ ಸದಸ್ಯರು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.