Home » ಬಿಜೆಪಿ ಉಡುಪಿ ನಗರ ಮಹಿಳಾ ಮೋರ್ಚಾ : ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ
 

ಬಿಜೆಪಿ ಉಡುಪಿ ನಗರ ಮಹಿಳಾ ಮೋರ್ಚಾ : ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

by Kundapur Xpress
Spread the love

ಉಡುಪಿ : ಬಿಜೆಪಿ ಉಡುಪಿ ನಗರ ಮಹಿಳಾ ಮೋರ್ಚಾ ವತಿಯಿಂದ ಅಧ್ಯಕ್ಷೆ ನೀತಾ ಪ್ರಭು ಅವರ ನೇತೃತ್ವದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಕುಂಜಿಬೆಟ್ಟು ಮಾಂಡವಿ ಟ್ರೇಡ್ ಸೆಂಟರ್ ಸಭಾಂಗಣದಲ್ಲಿ ವಿಶೇಷ ರೀತಿಯಲ್ಲಿ ಆಚರಿಸಲಾಯಿತು.ಮುಖ್ಯ ಅತಿಥಿಗಳಾದ ಡಾ! ರಾಜಲಕ್ಷ್ಮಿ ಅವರು ಗಣ್ಯರ ಉಪಸ್ಥಿತಿಯಲ್ಲಿ ಜ್ಯೋತಿ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮಹಿಳೆಯರಾದ ಶಕುಂತಲಾ ಶೆಟ್ಟಿ – ಹೈನುಗಾರಿಕೆ, ವಿಮಲ – ಸಂಜೀವಿನಿ ಗ್ರೂಪ್, ಅನುಷಾ – ವಕೀಲರು, ಸುಶೀಲ ಸಾಲಿಯಾನ್ – ಮಹಿಳಾ ಹೋಮ್ ಗಾರ್ಡ್, ಗೀತಾ ಕೃಷ್ಣರಾಜ್ – ಆಟೋ ಚಾಲಕಿ, ಲಲಿತ – ಪೌರ ಕಾರ್ಮಿಕರು ಹಾಗೂ ಸಮಾಜ ಸೇವಕರಾದ ನಿತ್ಯಾನಂದ ಒಳಕಾಡು, ವಿಶು ಶೆಟ್ಟಿ ಅಂಬಲಪಾಡಿ ಮತ್ತು ಸತೀಶ್ ಸಾಲಿಯಾನ್ ಅವರನ್ನು ಸನ್ಮಾನಿಸಲಾಯಿತು.

ವಿಶೇಷವಾಗಿ ಪರ್ಕಳದ ಮನೆ ಊಟ ಹೋಟೆಲ್ ನ ಹಿರಿಯ ದಂಪತಿಗಳಾದ ಗೋಪಾಲಕೃಷ್ಣ ಮತ್ತು ವಸಂತಿ ಅವರನ್ನು ಗೌರವಿಸಲಾಯಿತು.ಸಂತೆಕಟ್ಟೆ ವಾತ್ಸಲ್ಯ ಕ್ಲಿನಿಕ್ ನ ಡಾ! ರಾಜಲಕ್ಷ್ಮಿ ಅವರಿಂದ ಮಹಿಳೆಯರಿಗಾಗಿ ಉಪಯುಕ್ತ ವಿಶೇಷ ಆರೋಗ್ಯ ಮಾಹಿತಿ ಕಾರ್ಯಕ್ರಮ ನಡೆಯಿತು.

ಮನೋರಂಜನಾ ಕಾರ್ಯಕ್ರಮದ ಅಂಗವಾಗಿ ಬಿಜೆಪಿ ಉಡುಪಿ ನಗರ ಮಹಿಳಾ ಮೋರ್ಚಾದ ಅಧ್ಯಕ್ಷೆ ನೀತಾ ಪ್ರಭು ಸಂಯೋಜನೆಯಲ್ಲಿ ಮೋರ್ಚಾದ ಪದಾಧಿಕಾರಿಗಳು ಮತ್ತು ಸದಸ್ಯರ ಸಕ್ರಿಯ ಭಾಗವಹಿಸುವಿಕೆಯಲ್ಲಿ ನಡೆದ ವಿವಿಧ ವಿನೋದಾವಳಿಗಳ ಸಹಿತ ‘ನಾರೀ ಶಕ್ತಿ’ ಎಂಬ ವಿಶೇಷ ಕಾರ್ಯಕ್ರಮವು ಆಕರ್ಷಕವಾಗಿ ಮೂಡಿ ಬಂದು ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.

ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ, ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ, ಮಾಜಿ ಜಿಲ್ಲಾಧ್ಯಕ್ಷ ಕೆ.ಉದಯ ಕುಮಾರ್ ಶೆಟ್ಟಿ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಉಡುಪಿ ನಗರ ಮಂಡಲಾಧ್ಯಕ್ಷ ದಿನೇಶ್ ಅಮೀನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ ಶೆಟ್ಟಿ, ಮಹಿಳಾ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್, ಉಡುಪಿ ನಗರ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಾಂತಿ ಮನೋಜ್ ಸಹಿತ ಮಹಿಳಾ ಮೋರ್ಚಾ ಮತ್ತು ವಿವಿಧ ಸ್ತರದ ಪದಾಧಿಕಾರಿಗಳು, ಸಮಿತಿ ಸದಸ್ಯರು ಮತ್ತು ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

 

Related Articles

error: Content is protected !!