Home » ಕೋಟ ಪಡುಕರೆ ಕಾಲೇಜಿನಲ್ಲಿ ವಿಶ್ವ ಮಹಿಳಾ ದಿನಾಚರಣೆ
 

ಕೋಟ ಪಡುಕರೆ ಕಾಲೇಜಿನಲ್ಲಿ ವಿಶ್ವ ಮಹಿಳಾ ದಿನಾಚರಣೆ

ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿಯವರಿಗೆ ವಿಶೇಷ ಪುರಸ್ಕಾರ

by Kundapur Xpress
Spread the love

ಕೋಟ : ಮಹಿಳೆಯರ ಸ್ಥಿತಿಗತಿ ಸ್ಥಾನಮಾನಕ್ಕೆ ಅನುಗುಣವಾಗಿ ಆರ್ಥಿಕವಾಗಿ ಅಭಿವೃದ್ಧಿಗೊಳ್ಳಬೇಕು ಈ ಮೂಲಕ ಸಮಾಜದ ಮುಖ್ಯವಾಹಿನಿಯಲ್ಲಿ ಸ್ವಾವಲಂಬಿ ಬದುಕನ್ನುಕಟ್ಟಿಕೊಳ್ಳಬೇಕು ಎಂದು ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ ಹೇಳಿದರು.

ಕೋಟದ ಲಕ್ಷ್ಮೀ ಸೋಮಬಂಗೇರ ಸರಕಾರಿ ಪ್ರಥಮದರ್ಜೆ ಕಾಲೇಜು ಇಲ್ಲಿ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಹಮ್ಮಿಕೊಂಡ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಪ್ರಸ್ತುತ ಕಾಲಘಟ್ಟದಲ್ಲಿ ಮಹಿಳೆ ವಿವಿಧ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದಾಳೆ, ಆದರೆ ಗ್ರಾಮೀಣ ಭಾಗದ ಮಹಿಳೆಯರು ಉನ್ನತ ಸ್ಥಾನಕ್ಕೆರದಿರುವುದು ಬೇಸರದ ಸಂಗತಿ,ಒರ್ವ ಜಿಲ್ಲಾಧಿಕಾರಿ ಎಂಬ ಹೆಗ್ಗಳಿಕೆ ಸಾಮಾನ್ಯ ಕೃಷಿ ಕುಟುಂಬದಲ್ಲಿ ಹುಟ್ಟಿ ಕನ್ನಡ ಮಾಧ್ಯಮ ಶಾಲೆಯಲ್ಲಿ ಕಲಿತು ಈ ಹಂತಕ್ಕೆ ತಲುಪಿದ್ದೇನೆ ಆದ್ದರಿಂದ ಕನ್ನಡ ಮಾಧ್ಯಮದ ಬಗ್ಗೆ ಬಗ್ಗೆ ಕೀಳರಿಮೆ ಬೇಡ,ಮಹಿಳೆಗೆ ಸಮಾನ ಸ್ಥಾನಮಾನ ಸಿಕ್ಕಾಗ ಸಮಾಜ ಉನ್ನತ ಮಟ್ಟಕ್ಕೆ ಏರಲು ಸಾಧ್ಯ ಎಂಬುವುದಕ್ಕೆ ನಾನೆ ನಿದರ್ಶನ.
ಈ ವರ್ಷದ ವಿಶ್ವ ಮಹಿಳಾ ದಿನಾಚರಣೆ ವಿಶೇಷತಯ ಅನುಗುಣವಾಗಿ ಮಹಿಳೆರು ಉದ್ಯಮ ಕ್ಷೇತ್ರದಲ್ಲಿ ಭಾಗಿಯಾಗಬೇಕೆಂಬ ಧ್ಯೇಯ ಹೊಂದಿದ್ದು, ಈ ಮೂಲಕ ಮಹತ್ತರ ಮೈಲ್ಲಿಗಲ್ಲು ಸ್ಥಾಪಿಸುವಂತೆ ಕರೆ ನೀಡಿದರಲ್ಲದೆ,
ಪ್ರಸ್ತುತ ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಕ್ಷೇತ್ರದ ಮೂಲಕ ತಮ್ಮ ಭವಿಷ್ಯವನ್ನು ಭದ್ರಗೊಳಿಸಿಕೊಳ್ಳಬೇಕು,ಜೀವನದಲ್ಲಿ ಪರಿಶ್ರಮದ ಮೂಲಕ ಯಶಸ್ಸಿನ ಘಟ್ಟ ಏರಲು ಸಾಧ್ಯವಿದೆ ಎಂಬುವುದಕ್ಕೆ ತಮ್ಮ ವಿದ್ಯಾರ್ಥಿ ಜೀವನದ ವಿಚಾರವನ್ನು ತೆರೆದಿಟ್ಟು ಉಪನ್ಯಾಸ ನೀಡಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ ಇವರಿಗೆ ಸಾಧಕ ಮಹಿಳಾ ವಿಶೇಷ ಪುರಸ್ಕಾರ ನೀಡಿ ಗೌರವಿಸಲಾಯಿತು.
ಸಭೆಯ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ.ಎಸ್ ರಾಜೇಂದ್ರ ಎಸ್ ನಾಯಕ ವಹಿಸಿ ಜಿಲ್ಲಾಧಿಕಾರಿಗಳಿಗೆ ಕಾಲೇಜಿನ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಈ ಭಾಗಕ್ಕೆ ಬಸ್ ಸಂಚಾರಗೊಳಿಸಲು ಮನವಿ ನೀಡಿದರು.
ಇದೇ ವೇಳೆ ಜಿಲ್ಲಾಧಿಕಾರಿಗಳು ಕಾಲೇಜಿನ ವಾರ್ಷಿಕ ಕಡಲು ಸಂಚಿಕೆಯನ್ನು ಬಿಡುಗಡೆಗೊಳಿಸಿದರು.
ಮುಖ್ಯ ಅಭ್ಯಾಗತರಾಗಿ ಗೀತಾನಂದ ಫೌಂಡೇಶನ್ ಮಣೂರು ಪ್ರವರ್ತಕ ಆನಂದ್ ಸಿ ಕುಂದರ್,ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರಮೇಶ್ ಆಚಾರ್,ಉಪನ್ಯಾಸಕ ಶಂಕರ್ ನಾಯಕ್ ಉಪಸ್ಥಿತರಿದ್ದರು. ಉಪನ್ಯಾಸಕಿ ಪ್ರೋ.ಡಾ.ಸುನಿತಾ ಸ್ವಾಗತಿಸಿದರು. ಕಾರ್ಯಕ್ರಮವನ್ನು ಉಪನ್ಯಾಸಕಿ ಮಮತಾ ನಿರೂಪಿಸಿದರು.

 

Related Articles

error: Content is protected !!