ಬೆಂಗಳೂರು: ಆಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಮಾಜಿ ಉಪ ಪ್ರಧಾನಿ ಎಲ್.ಕೆ.ಅಡ್ವಾಣಿ ಅವರೇ ಮೂಲಕಾರಣ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.
ತಮ್ಮ ಧವಳಗಿರಿ ನಿವಾಸದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಯೋಧ್ಯೆಯಲ್ಲಿ ಬಾಬರಿ ಕಟ್ಟಡವನ್ನು ಕೆಡವುವ ಸಂದರ್ಭ ಎಲ್.ಕೆ.ಆಡ್ವಾಣಿ ಅವರು ಭಾಗವಹಿಸಿದ್ದರು. ಆ ಸಂದರ್ಭದಲ್ಲಿ ನಡೆದ ಸಭೆಯಲ್ಲಿ ಭಾಗವಹಿಸುವಸೌಭಾಗ್ಯ ನನಗೂಸಿಕ್ಕಿತ್ತು ಎಂದು ನೆನಪು ಮಾಡಿಕೊಂಡರು.
ಅಂದಿನ ಹಲವು ರಥಯಾತ್ರೆಗಳಲ್ಲಿ ನಾನು ಭಾಗವಹಿಸಿದ್ದೆ ಇದೆಲ್ಲದರ ಪರಿಣಾಮ ಇಂದು ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಿದೆ. ಇಂಥ ಸಂದರ್ಭದಲ್ಲಿ ಎಲ್.ಕೆ.ಆಡ್ವಾಣಿ ಅವರಿಗೆ ಭಾರತ ರತ್ನ ಘೋಷಿಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ತೀರ್ಮಾನಕ್ಕೆ ಇಡೀ ದೇಶ, ವಿದೇಶಗಳಲ್ಲಿ ಎಲ್ಲರೂ ಸಂತೋಷ, ಸಂತಸ ವ್ಯಕ್ತಪಡಿಸುತ್ತಿದ್ದಾರೆ ಎಂದು ಮೆಚ್ಚುಗೆಸೂಚಿಸಿದರು.