ಉಡುಪಿ : ಯಕ್ಷಶಿಕ್ಷಣ ಟ್ರಸ್ಟ್ (ರಿ.) ಉಡುಪಿ ವತಿಯಿಂದ ಕಾಪು, ಉಡುಪಿ, ಕುಂದಾಪುರ, ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 90 ಪ್ರೌಢ ಶಾಲಾ ಮಕ್ಕಳಿಗೆ ಯಕ್ಷಗಾನ ತರಬೇತಿ ನೀಡುವ ನಿಟ್ಟಿನಲ್ಲಿ ಹಮ್ಮಿಕೊಳ್ಳಲಾದ “ಯಕ್ಷಶಿಕ್ಷಣ – 2024” ರ ಉದ್ಘಾಟನಾ ಸಮಾರಂಭ ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನಡೆಯಿತು.
ಪರ್ಯಾಯ ಶ್ರೀಪುತ್ತಿಗೆ ಮಠದ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮನ್ನು ಉದ್ಘಾಟಿಸಿ ಆಶೀರ್ವಚಿಸಿದರು.
ಈ ಸಂದರ್ಭದಲ್ಲಿಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಶೆಟ್ಟಿಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ, ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ, ಯಕ್ಷಶಿಕ್ಷಣ ಟ್ರಸ್ಟ್ (ರಿ.) ಉಡುಪಿ ಸ್ಥಾಪಕ ಅಧ್ಯಕ್ಷರಾದ ಕೆ. ರಘುಪತಿ ಭಟ್, ಅಂಬಲಪಾಡಿ ದೇವಸ್ಥಾನದ ಧರ್ಮದರ್ಶಿಗಳಾದ ನಿ.ಬೀ. ವಿಜಯ ಬಲ್ಲಾಳ್, ಯಕ್ಷಗಾನ ಕಲಾರಂಗ (ರಿ.) ಉಡುಪಿ ಅಧ್ಯಕ್ಷರಾದ ಎಂ ಗಂಗಾಧರ ರಾವ್, ಕ್ಷೇತ್ರ ಶಿಕ್ಷಣಾಧಿಕಾರಿ ಯಲ್ಲಮ್ಮ, ಯಕ್ಷಶಿಕ್ಷಣ ಟ್ರಸ್ಟ್ (ರಿ.) ಉಡುಪಿ ಇದರ ಕಾರ್ಯದರ್ಶಿಗಳಾದ ಮುರಳಿ ಕಡೆಕಾರ್ ಹಾಗೂ ಗಣ್ಯರು ಉಪಸ್ಥಿತರಿದ್ದರು