Home ಕರಾವಳಿ ಸುದ್ದಿಗುರುಗಳೊಂದಿಗೆ ಸಮಾಲೋಚನ ಸಭೆ

ಗುರುಗಳೊಂದಿಗೆ ಸಮಾಲೋಚನ ಸಭೆ

ಯಕ್ಷ ಶಿಕ್ಷಣ ಟ್ರಸ್ಟ್

by Kundapur Xpress

ಉಡುಪಿ : ಯಕ್ಷ ಶಿಕ್ಷಣ ಟ್ರಸ್ಟ್ (ರಿ) ಉಡುಪಿ ಇದರ ಯಕ್ಷಗಾನ ತರಬೇತಿ ನೀಡುವ ಗುರುಗಳೊಂದಿಗೆ ನಡೆದ ಸಮಾಲೋಚನ ಸಭೆಯಲ್ಲಿ ಇಂದು ದಿನಾಂಕ 16-08-2023 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು

ಯಕ್ಷ ಶಿಕ್ಷಣ ಟ್ರಸ್ಟ್ ಮೂಲಕ ಈಗಾಗಲೇ ಹಲವರು ಶಾಲೆಗಳಲ್ಲಿ ಯಕ್ಷಗಾನ ತರಬೇತಿ ಆರಂಭಗೊಂಡಿದ್ದು ಮುಂದಿನ ಡಿಸೆಂಬರ್ ತಿಂಗಳ ಒಳಗೆ ತರಬೇತಿ ಮುಗಿಸಿ ಡಿಸೆಂಬರ್ ತಿಂಗಳಲ್ಲಿ ನಡೆಯುವ ಯಕ್ಷಗಾನ ಪ್ರದರ್ಶನದಲ್ಲಿ ತರಬೇತಿ ಪಡೆದ ಎಲ್ಲಾ ವಿದ್ಯಾರ್ಥಿಗಳು ಪ್ರದರ್ಶನಗಳನ್ನು ನೀಡಿ ಯಶಸ್ವಿಗೊಳಿಸುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು

ಈ ಸಂದರ್ಭದಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕಿರಣ್ ಕೊಡ್ಗಿ, ಉಡುಪಿ ವಿಧಾನಸಭಾ ಕ್ಷೇತ್ರದ ನಿಕಟಪೂರ್ವ ಶಾಸಕರಾದ ಕೆ ರಘುಪತಿ ಭಟ್, ಯಕ್ಷ ಶಿಕ್ಷಣ ಟ್ರಸ್ಟ್ ಕಾರ್ಯದರ್ಶಿಗಳಾದ ಮುರಳಿ ಕಡೆಕಾರ್, ಯಕ್ಷಗಾನ ಕಲಾರಂಗದ ಅಧ್ಯಕ್ಷರಾದ ಎಂ ಗಂಗಾಧರ ರಾವ್, ಉಪಾಧ್ಯಕ್ಷರಾದ ವಿ.ಜಿ ಶೆಟ್ಟಿ, ಎಸ್. ವಿ ಭಟ್ ಹಾಗೂ ಯಕ್ಷ ಶಿಕ್ಷಣ ಟ್ರಸ್ಟ್ ನ ಪದಾಧಿಕಾರಿಗಳು ಉಪಸ್ಥಿತರಿದ್ದರು

Related Articles