ಕುಂದಾಪುರ : ಕುಂದಾಪುರದ ಸರಕಾರಿ ಪದವಿಪೂರ್ವ ಕಾಲೇಜು ವಠಾರದಲ್ಲಿ ಜರಗಿದ ಯಕ್ಷಶಿಕ್ಷಣ ಟ್ರಸ್ಟ್ ನ ಕುಂದಾಪುರ ಪರಿಸರದ ಐದು ಶಾಲೆಗಳ ಆರು ಪ್ರದರ್ಶನ 05.01.2024 ರಂದು ಸಮಾಪನಗೊಂಡಿತು. ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕುಂದಾಪುರ ಶಾಸಕರಾದ ಶ್ರೀ ಕಿರಣ್ ಕುಮಾರ್ ಕೊಡ್ಗಿಯವರು ಈ ಮಹಾ ಅಭಿಯಾನ ಎಲ್ಲರ ಸಹಕಾರದಿಂದ ಸಾಧ್ಯವಾಗಿದೆ. ಮುಂದೆಯೂ ನಾವೆಲ್ಲ ಒಟ್ಟಾಗಿ ನಮ್ಮ ಮಣ್ಣಿನ ಈ ಶ್ರೀಮಂತ ಕಲೆಯನ್ನು ಉಳಿಸಿ ಬೆಳೆಸೋಣ ಎಂದು ಹೇಳಿದರು.
ಕುಂದಾಪುರದ ಸಹಾಯಕ ಆಯುಕ್ತರಾದ ಶ್ರೀಮತಿ ರಶ್ಮಿ, ಬಿ. ಎಸ್. ಪ್ರಮಾಣಪತ್ರ ವಿತರಿಸಿ ಮಾತನಾಡುತ್ತಾ ಯಕ್ಷಗಾನ, ಭರತ ನಾಟ್ಯಶಾಸ್ತ್ರದಲ್ಲಿ ಹೇಳಿರುವ ಆಂಗಿಕ, ಆಹಾರ್ಯ, ವಾಚಿಕ, ಸಾತ್ವಿಕ ಈ ನಾಲ್ಕೂ ಅಂಶ ಒಳಗೊಂಡಿರುವ ಪರಿಪೂರ್ಣ ಕಲಾಪ್ರಕಾರ ಎಂದು ಅಭಿಪ್ರಾಯ ಪಟ್ಟರು. ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್, ಉಪ ಪ್ರಾಂಶುಪಾಲ ಕಿರಣ್ ಹೆಗ್ಡೆ, ಕುಂದಾಪುರ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಕೃಷ್ಣಮೂರ್ತಿ ಯು, ಸಿ.ಎ. ಬ್ಯಾಂಕ್ ಅಧ್ಯಕ್ಷ ಸದಾನಂದ ಬಳ್ಕೂರು ಅಭ್ಯಾಗತರಾಗಿ ಭಾಗವಹಿಸಿದ್ದರು.