ಕುಂದಾಪುರ : ಕೋಡಿಕನ್ಯಾನದ ಸೋಮಬಂಗೇರ ಸ್ಮಾರಕ ಸರಕಾರಿ ಪ್ರೌಢಶಾಲೆಯಲ್ಲಿ ಯಕ್ಷ ಶಿಕ್ಷಣ ಟ್ರಸ್ಟ್ ಇವರಿಂದ ಯಕ್ಷಗಾನ ತರಬೇತಿ ಉದ್ಘಾಟನಾ ಕಾರ್ಯಕ್ರಮವನ್ನು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿಯವರು ಉದ್ಘಾಟಿಸಿದರು
ಕಿರಣ್ ಕುಮಾರ್ ಕೊಡ್ಗಿಯವರು ಮಾತನಾಡಿ ಸ್ಥಳೀಯವಾಗಿ ಅನೇಕ ಪ್ರೌಢ ಕಲಾವಿದರು ಯಕ್ಷಗಾನ ಕಲೆಯನ್ನು ಬೆಳಗುತ್ತಿದ್ದಾರೆ.ಅಂತಹವರನ್ನು ಪ್ರೋತ್ಸಾಹಿಸುವುದು ಸಮಾಜದ ಕರ್ತವ್ಯ. ಬಾಲ್ಯದಲ್ಲಿಯೇ ಯಕ್ಷಗಾನವನ್ನು ಕಲಿಯುವುದರಿಂದ ಸುಲಭದಲ್ಲಿ ಅದು ಸಿದ್ಧಿಸುತ್ತದೆ ಎಂದರು ಕರಾವಳಿಯ ಗಂಡು ಕಲೆಯಾದ ಯಕ್ಷಗಾನವನ್ನು ವಿದ್ಯಾರ್ಥಿಗಳಿಗೆ ಪರಿಚಯಿಸುವುದರಿಂದ ಸಾತ್ವಿಕತೆ ಬೆಳೆಯುವುದರೊಂದಿಗೆ ಭವಿಷ್ಯದಲ್ಲಿಯೂ ಈ ಕಲೆ ಬೆಳಗಲು ಸಹಕಾರಿಯಾಗುತ್ತದೆ. ಸಾಕಷ್ಟು ಇತಿಹಾಸ ಹೊಂದಿರುವ ಈ ಕಲೆಯನ್ನು ಉಳಿಸುವ ಪ್ರಯತ್ನ ಮಾಡಬೇಕು ಎಂದು ಹೇಳಿದರು
ಈ ಸಂದರ್ಭದಲ್ಲಿ ಯಕ್ಷ ಶಿಕ್ಷಣ ಪ್ರತಿಷ್ಠಾನದ ಕಾರ್ಯದರ್ಶಿ ಮುರಳಿ,ಕಡೆಕರ್ ಕೋಡಿ-ಕನ್ಯಾನ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಪ್ರಭಾಕರ್ ಮೆಂಡನ್, ಮತ್ತು ಪಂಚಾಯಿತಿನ ಸದಸ್ಯರು, ಶಾಲಾ ಮುಖ್ಯೋಪಾಧ್ಯಾಯರು ಹಾಗೂ ಅಧ್ಯಾಪಕ ವೃಂದದವರು, ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರು, ಸದಸ್ಯರು, ಹಳೆ ವಿದ್ಯಾರ್ಥಿ ಸಂಘದ ಸದಸ್ಯರು ಮತ್ತು ಮಕ್ಕಳ ಪೋಷಕರು, ಗ್ರಾಮಸ್ಥರು, ಉಪಸಿತರಿದ್ದರು