Home » ಯಕ್ಷಗಾನ ತರಬೇತಿ ಉದ್ಘಾಟನೆ
 

ಯಕ್ಷಗಾನ ತರಬೇತಿ ಉದ್ಘಾಟನೆ

by Kundapur Xpress
Spread the love

ಕೋಟ : ಯಕ್ಷ ಶಿಕ್ಷಣ ಟ್ರಸ್ಟ್ ಉಡುಪಿ ಇವರ ಆಶ್ರಯದಲ್ಲಿ ನಡೆಯುವ ಶಾಲಾ ವಿದ್ಯಾರ್ಥಿಗಳ ಯಕ್ಷಗಾನ ತರಬೇತಿ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು ಸರಕಾರಿ ಸಂಯುಕ್ತ ಪ್ರೌಢಶಾಲೆ ಮೂಡುಗಿಳಿಯಾರು ಇಲ್ಲಿನ ಸಭಾಂಗಣದಲ್ಲಿ ಇತ್ತೀಚಿಗೆ ಜರುಗಿತು.
ಮುಖ್ಯ ಅತಿಥಿಯಾಗಿ ನಿವೃತ್ತ ಉಪನ್ಯಾಸಕ ಶ್ರೀನಿವಾಸ ಸೋಮಯಾಜಿ ದೀಪ ಪ್ರಜ್ವಲನದೊಂದಿಗೆ ಚೆಂಡೆಯನ್ನು ಬಾರಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಯಕ್ಷಗಾನದ ಮಹತ್ವದ ಬಗ್ಗೆ ಬೆಳಕು ಚೆಲ್ಲಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೋಟ ಗ್ರಾಮ ಪಂಚಾಯತಿಯ ಅಧ್ಯಕ್ಷೆ ಜ್ಯೋತಿ ಭರತ್ ಕುಮಾರ್ ಶೆಟ್ಟಿ ಇವರು ಯಕ್ಷಗಾನ ಕಲಿಕೆಯಿಂದ ಉಂಟಾಗುವ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಯ ಕುರಿತು ಮಾತನಾಡಿ ಶುಭ ಹಾರೈಸಿದರು. ಯಕ್ಷಗಾನ ಕಲಿಕೆಯ ಗುರು ರಾಘವೇಂದ್ರ ಇವರು ಯಕ್ಷಗಾನದ ಕಲಿಕೆಯ ವಿವಿಧ ಆಯಾಮಗಳ ಪರಿಚಯ ಮಾಡಿಕೊಟ್ಟರು. ಕಾರ್ಯಕ್ರಮದಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ವೆಂಕಟೇಶ ಅಡಿಗ, ನಿವೃತ್ತ ಮುಖ್ಯ ಶಿಕ್ಷಕ ಸೋಮಶೇಖರ ಶೆಟ್ಟಿ, ಪ್ರೌಢಶಾಲಾ ಹಿಂದಿನ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸುರೇಶ ಗಿಳಿಯಾರ್, ಪ್ರೌಢಶಾಲಾ ಅಧ್ಯಾಪಕ ವೃಂದದವರು, ಎಸ್‌ಡಿಎಂಸಿ ಸದಸ್ಯರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಪ್ರೌಢಶಾಲಾ ಪ್ರಭಾರ ಮುಖ್ಯ ಶಿಕ್ಷಕ ಅಶೋಕ ಸೋಮಯಾಜಿ ಸ್ವಾಗತಿಸಿ, ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ವಸಂತಿ ವಂದನಾರ್ಪಣೆಗೈದರು. ದೈಹಿಕ ಶಿಕ್ಷಣ ಶಿಕ್ಷಕ ಶೇಖರ್ ಕಾರ್ಯಕ್ರಮದ ಸಂಪೂರ್ಣ ನಿರೂಪಣೆ ನಡೆಸಿಕೊಟ್ಟರು

   

Related Articles

error: Content is protected !!