73
ಕಾಪು : ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ನೇತೃತ್ವದಲ್ಲಿ ಯಕ್ಷ ಶಿಕ್ಷಣ ಟ್ರಸ್ಟ್ (ರಿ.) ಉಡುಪಿ ವತಿಯಿಂದ ಕಳೆದ 2 ವರ್ಷಗಳಿಂದ ಕಾಪು ವಿಧಾನಸಭಾ ಕ್ಷೇತ್ರದ ಸರಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಯಕ್ಷಗಾನ ತರಬೇತಿ ನೀಡಲಾಗುತ್ತಿದ್ದು 2025-26 ನೇ ಸಾಲಿನಲ್ಲಿ ಸರಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಯಕ್ಷಗಾನ ತರಬೇತಿ ಆರಂಭಿಸುವ ನಿಟ್ಟಿನಲ್ಲಿ ಶಾಲಾ ಮುಖ್ಯೋಪಾಧ್ಯಾಯರು ಮತ್ತು ಮುಖ್ಯಸ್ಥರೊಂದಿಗೆ ನಡೆದ ಪೂರ್ವ ಸಿದ್ಧತಾ ಸಭೆಯಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ತಮ್ಮ ಸಲಹೆ ಸೂಚನೆಗಳನ್ನು ನೀಡಿದರು.*
ಈ ಸಂದರ್ಭದಲ್ಲಿ ಯಕ್ಷಶಿಕ್ಷಣ ಟ್ರಸ್ಟ್ (ರಿ.) ಉಡುಪಿ ಇದರ ಕಾರ್ಯದರ್ಶಿಗಳಾದ ಮುರಳಿ ಕಡೆಕಾರ್, ಟ್ರಸ್ಟಿಗಳಾದ ವಿ.ಜಿ ಶೆಟ್ಟಿ ಹಾಗೂ ಶಾಲಾ ಮುಖ್ಯೋಪಾಧ್ಯಾಯರು, ಮುಖ್ಯಸ್ಥರು ಉಪಸ್ಥಿತರಿದ್ದರು.*

