Home » ಬ್ರಹ್ಮಾವರ ವಲಯ ಮಟ್ಟದ ಯೋಗಾಸನ ಸ್ಪರ್ಧೆ
 

ಬ್ರಹ್ಮಾವರ ವಲಯ ಮಟ್ಟದ ಯೋಗಾಸನ ಸ್ಪರ್ಧೆ

by Kundapur Xpress
Spread the love

ಕೋಟ: ಯೋಗದ ಮೂಲಕ ಆರೋಗ್ಯವಂತ ಸಮಾಜ ಕಟ್ಟಲು ಸಾಧ್ಯವಿದೆ ಎಂಬುವುದನ್ನು ನಮ್ಮ ಪೂರ್ವಜರು ತೊರಿಸಿಕೊಟ್ಟಿದ್ದಾರೆ ಎಂದು ಗೀತಾನಂದ ಫೌಂಡೇಶನ್ ಮಣೂರು ಇದರ ಪ್ರವರ್ತಕ ಆನಂದ್ ಸಿ ಕುಂದರ್ ನುಡಿದರು.
ಶನಿವಾರ ಕೋಟತಟ್ಟು ಶಾಲಾ ಸಭಾಂಗಣದಲ್ಲಿ ಶಾಲಾ ಶಿಕ್ಷಣ ಇಲಾಖೆ,ಜಿಲ್ಲಾ ಪಂಚಾಯತ್ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಬ್ರಹ್ಮಾವರ ವಲಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕೋಟತಟ್ಟು ಇವರುಗಳ ಆಶ್ರಯದಲ್ಲಿ ಬ್ರಹ್ಮಾವರ ವಲಯ ಮಟ್ಟದ ಯೋಗಾಸನ ಸ್ಪರ್ಧೆ 2024-25 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಪತಂಜಲಿ ಮೂನಿಗಳು ಯೋಗವನ್ನು ಈ ರಾಷ್ಟ್ರಕ್ಕೆ ಧಾರೆ ಎರೆದಿದ್ದಾರೆ ಆದರೆ ಅದನ್ನು ನಾವುಗಳು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು ಯೋಗದಿಂದ ಮಾನಸಿಕ ಮನೋಸ್ಥೈರ್ಯ ವೃದ್ಧಿಸುವುದಲ್ಲದೆ ದೈಹಿಕ ಬೆಳವಣಿಗೆಗೆ ಪೂರಕವಾಗಿದೆ.ಇದನ್ನು ಸ್ಪರ್ಧೆಯ ಮೂಲಕ ಮಕ್ಕಳಿಗೆ ಮಹತ್ವ ಸಾರುವ ಕಾರ್ಯ ಶ್ಲಾಘನೀಯ ಎಂದು ಇಲಾಖೆಯನ್ನು ಪ್ರಶಂಸಿದರು.
ಸಭೆಯ ಅಧ್ಯಕ್ಷತೆಯನ್ನು ಶಾಲಾ ಎಸ್ ಡಿಎಂಸಿ ಅಧ್ಯಕ್ಷ ಸುಲೇಮಾನ್ ಸಾಹೇಬ್ ವಹಿಸಿದ್ದರು.ಮುಖ್ಯ ಅಭ್ಯಾಗತರಾಗಿ ಬ್ರಹ್ಮಾವರ ಕ್ಷೇತ್ರ ಶಿಕ್ಷಣಾಧಿಕಾರಿ ಶಬನಾ ಅಜುಂ ,ಶಿಕ್ಷಣ ಸಂಯೋಜಕ ಪ್ರಕಾಶ್ ಬಿ.ಬಿ,ದೈಹಿಕ ಶಿಕ್ಷಣ ಶಿಕ್ಷಕ ಸಂಘ ತಾಲೂಕು ಅಧ್ಯಕ್ಷ ಪ್ರಸನ್ನ ಕುಮಾರ್,ಶಾಲಾ ಪ್ರಾಥಮಿಕ ಶಿಕ್ಷಕರ ಸಂಘದ ಬ್ರಹ್ಮಾವರ ತಾಲೂಕು ಅಧ್ಯಕ್ಷ ಪ್ರಶಾಂತ್ ಶೆಟ್ಟಿ ಹಾವಂಜೆ,ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ವಿಜಯಕುಮಾರ್ ಶೆಟ್ಟಿ, ಕೋಟತಟ್ಟು ಗ್ರಾಮಪಂಚಾಯತ್ ಸದಸ್ಯರಾದ ರವೀಂದ್ರ ತಿಂಗಳಾಯ,ವಿದ್ಯಾ ಸಾಲಿಯಾನ್, ಶಾಲಾ ಹಳೇವಿದ್ಯಾರ್ಥಿ ಸಂಘದ ಅಧ್ಯಕ್ಷ ಶಿವಮೂರ್ತಿ ಕೆ,ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಲಕ್ಷಣ್‌ ಸುವರ್ಣ, ಶಿಕ್ಷಣ ಇಲಾಖೆಯ ಕ್ಷೇತ್ರ ಸಮನ್ವಯ ಅಧಿಕಾರಿ ಅರ್ಚನಾ ಉಪಸ್ಥಿತರಿದ್ದರು. ಶಿಕ್ಷಕರಾದ ಗಣೇಶ್ ಆಚಾರ್ ನಿರೂಪಣೆಗೈದರು.ಶಾಲಾ ಮುಖ್ಯ ಶಿಕ್ಷಕಿ ಜಾನಕಿ ಭಟ್ ಸ್ವಾಗತಿಸಿದರು. ತಾಲೂಕು ದೈಹಿಕ ಪರಿವೀಕ್ಷಣಾಧಿಕಾರಿ ಪದ್ಮಾವತಿ ಪ್ರಾಸ್ತಾವನೆ ಸಲ್ಲಿಸಿದರು. ಸಹಶಿಕ್ಷಕಿ ಸಂಗೀತ ಕೋಟ್ಯಾನ್ ವಂದಿಸಿದರು.

   

Related Articles

error: Content is protected !!