Home » ಮೂವರು ಬಾಂಗ್ಲಾ ಪ್ರಜೆಗಳ ಬಂಧನ
 

ಮೂವರು ಬಾಂಗ್ಲಾ ಪ್ರಜೆಗಳ ಬಂಧನ

by Kundapur Xpress
Spread the love

ಹಾಸನ : ಉಡುಪಿ, ಶಿವಮೊಗ್ಗ ಬಳಿಕ ಇದೀಗ ನಕಲಿ ಆಧಾರ್‌ಕಾರ್ಡ್‌ ಬಳಸಿ ನಗರದಲ್ಲಿ ವಾಸವಿದ್ದ ಮೂವರು ಬಾಂಗ್ಲಾದೇಶಿ ಪ್ರಜೆಗಳನ್ನು ಜಿಲ್ಲಾ ಅಪರಾಧ ಪತ್ತೆ ದಳ ವಿಭಾಗದ ಪೊಲೀಸರು ಬಂಧಿಸಿದ್ದಾರೆ.

ಜಮಾಲ್ ಆಲಿ, ಫಾರೂಕ್ ಆಲಿ, ಅಕ್ಟಲ್ ಅಕ್ಕು ಬಂಧಿತರು. ಇವರು ಹಾಸನ ನಗರದ 80 ಅಡಿ ರಸ್ತೆಯ, ಗದ್ದೆಹಳ್ಳದ ನಾಲ್ಕನೇ ಅಡ್ಡ ರಸ್ತೆಯ ಜುಬೇ‌ರ್ ಎಂಬುವವರ ಮನೆಯಲ್ಲಿ ವಾಸವಿದ್ದರು. ಜುಬೇರ್‌ ನಿರ್ಮಿಸುತ್ತಿರುವ ಕಟ್ಟಡದಲ್ಲಿ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು.

ಪಶ್ಚಿಮ ಬಂಗಾಳದಲ್ಲಿ ನಕಲಿ ಆಧಾ‌ರ್ ಕಾರ್ಡ್ ಪಡೆದಿದ್ದ ಈ ಮೂವರು ಬಾಂಗ್ಲಾದಿಂದ ಅಕ್ರಮವಾಗಿ ನುಸುಳಿ ಬಂದಿದ್ದರು. ಇವರ ಬಳಿ ಇರುವ ಆಧಾ‌ರ್ ಕಾರ್ಡ್‌ಗಳು ನಕಲಿ ಎನ್ನುವುದು ಖಾತ್ರಿಯಾದ ನಂತರ ಮೂವರನ್ನೂ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಪೆನ್ನನ್ ಮೊಹಲ್ಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಳೆದ 3-5 ವರ್ಷಗಳಲ್ಲಿ ಬಾಂಗ್ಲಾದೇಶ ದಿಂದ ಸುಮಾರು 25,000 ಮಂದಿ ಅಕ್ರಮವಾಗಿ ಭಾರತ ಪ್ರವೇಶಿಸಿದ್ದಾರೆ ಎಂದು ಉಡುಪಿಯಲ್ಲಿ ಬಂಧಿತರಾದವರು ತಿಳಿಸಿದ್ದರು. ಪೊಲೀಸರ ಪ್ರಕಾರ ಕರ್ನಾಟಕದಲ್ಲಿರುವ ಒಟ್ಟು ಅಕ್ರಮ ಬಾಂಗ್ಲಾ ವಲಸಿಗರ ಸಂಖ್ಯೆ ಒಂದು ಲಕ್ಷ ಮೀರಬಹುದು ಎಂಧು ನಂಬಲಾಗಿದೆ

   

Related Articles

error: Content is protected !!