Categories
ಅಪರಾಧ

ದನದ ರುಂಡ ಪತ್ತೆ ಪ್ರಕರಣ : 6 ಮಂದಿ ಬಂಧನ

ಬ್ರಹ್ಮಾವರ : ಬ್ರಹ್ಮಾವರ ಸಮೀಪದ ಕುಂಜಾಲಿನ ಜಂಕ್ಷನ್ ನಲ್ಲಿ ಪತ್ತೆಯಾದ ದನದ ಕಳೇಬರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿಯನ್ನು ಬಂಧಿಸಿರುವ ಕುರಿತು  ಉಡುಪಿ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್  ಮಾಹಿತಿ ನೀಡಿದರು.

ಬಂಧಿತರನ್ನು ರಾಮ(49), ಪ್ರಸಾದ್‌(21), ನವೀನ್‌(35), ಕೇಶವ ನಾಯ್ಕ್‌(50) ಸಂದೇಶ(35), ರಾಜೇಶ್ (28) ಎಂದು ಗುರುತಿಸಲಾಗಿದೆ

ಎಸ್ಪಿ ನೀಡಿರುವ ಮಾಹಿತಿಯ ಪ್ರಕಾರ, ಆರೋಪಿ ಕೇಶವ ತನ್ನ ಮನೆಯಲ್ಲಿದ್ದ ದನವನ್ನು ರಾಮಣ್ಣನವರಿಗೆ ಮಾಂಸ ಮಾಡಲು ನೀಡಿದ್ದು ಅದರಂತೆ ಆರೋಪಿಗಳು ಮಾಂಸ ಮಾಡಿ ಅದರ ತ್ಯಾಜ್ಯವನ್ನು ಎಸೆಯಲು ಸ್ಕೂಟರ್ ನಲ್ಲಿ ರಾತ್ರಿ ತೆರಳುತ್ತಿದ್ದಾಗ ರಸ್ತೆಗೆ ಬಿದ್ದಿದೆ ಎಂದು ವಿವರಿಸಿದ್ದಾರೆ. ಈಗಾಗಲೇ ಆರು ಮಂದಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ