112
ಉಡುಪಿ : ಉಡುಪಿ ಸಮೀಪದ ನಿಟ್ಟೂರು ಶಾಲೆಯ ಮುಂಭಾಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿದ್ದ ಇನ್ಸುಲೇಟರ್ ವಾಹನಕ್ಕೆ ಕಾರು ಡಿಕ್ಕಿ ಹೊಡೆದ ಘಟನೆ ನಡೆದಿದೆ ಅದೃಷ್ಟವಶಾತ್ ಚಾಲಕ ಪ್ರಾಣಪಾಯದಿಂದ ಪಾರಾಗಿದ್ದಾರೆ.
ಉಡುಪಿಯಿಂದ ಸಂತೆಕಟ್ಟೆ ಹೋಗುವ ಮಾರ್ಗದಲ್ಲಿ ಉತ್ತರ ಪ್ರದೇಶ ನೋಂದಣಿಯ ಕಾರೊಂದು ನಿಂತಿದ್ದ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಕಾರಿನ ಮುಂಭಾಗ ಭಾಗಶಃ ನಜ್ಜುಗುಜ್ಜಾಗಿದೆ ಕಾರು ರಸ್ತೆಗೆ ಅಡ್ಡವಾಗಿ ನಿಂತ ಪರಿಣಾಮ ಕೆಲ ಹೊತ್ತು ಟ್ರಾಫಿಕ್ ಜಾಮ್ ಉಂಟಾಯಿತು.

