Home » ಇನ್ನೋವಾ ಅಪಘಾತ ತಾಯಿ,ಮಗ ಸಾವು
 

ಇನ್ನೋವಾ ಅಪಘಾತ ತಾಯಿ,ಮಗ ಸಾವು

by Kundapur Xpress
Spread the love

ಉಪ್ಪಿನಂಗಡಿ : ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್‌ ನಲ್ಲಿ ಕಂಟೈನರ್‌ ಲಾರಿ ಹಾಗೂ ಇನ್ನೋವಾ ಕಾರೊಂದರ ನಡುವೆ ಡಿಕ್ಕಿ ಸಂಭವಿಸಿ ಪಾಣೆ ಮಂಗಳೂರು ಮೂಲದ ತಾಯಿ ಹಾಗೂ ಮಗ ಮೃತಪಟ್ಟ ಘಟನೆ ಮಂಗಳವಾರ ಮುಂಜಾನೆ ನಡೆದಿದೆ. ಪಾಣೆಮಂಗಳೂರು ಸಮೀಪದ ಬೊಂಡಾಲ ನಿವಾಸಿ ಶಬೀರ್‌ ಎಂಬವರ ಪತ್ನಿ ಸಫಿಯಾ (50) ಹಾಗೂ ಅವರ ಪುತ್ರ ಮುಹಮ್ಮದ್ ಶಫೀಕ್ (20) ಮೃತರು. ಕಾರಿನಲ್ಲಿದ್ದ ಮೂವರು ಮಕ್ಕಳ ಸಹಿತ ಇತರರಿಗೆ ಗಂಭೀರ ಸ್ವರೂಪದ ಗಾಯವಾಗಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ. ಇವರೆಲ್ಲರೂ ಬೆಂಗಳೂರಿನಲ್ಲಿ ಸಂಬಂಧಿಕರ ಮದುವೆ ಔತಣ ಕೂಟದಲ್ಲಿ ಪಾಲ್ಗೊಂಡು ಕುಟುಂಬ ಸಮೇತರಾಗಿ ಇನ್ನೋವಾ ಕಾರಿನಲ್ಲಿ ಮಂಗಳೂರಿಗೆ ವಾಪಸ್ ಬರುತ್ತಿದ್ದರು. ಮಂಗಳೂರಿನಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಕಂಟೈನರ್‌ ಲಾರಿ ನಡುವೆ ಸಕಲೇಶಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯ ಶಿರಾಡಿ ಘಾಟ್‌ನ ಕೆಂಪುಹೊಳೆ ಸೇತುವೆ ಬಳಿ ಡಿಕ್ಕಿ ಸಂಭವಿಸಿದೆ.

ಘಟನೆಯಲ್ಲಿ ಗಾಯಗೊಂಡಿದ್ದ ಗಾಯಾಳುಗಳಿಗೆ ನೆಲ್ಯಾಡಿ ಅಶ್ವಿನಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯಲಾಗಿದೆ. ಸಕಲೇಶಪುರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

   

Related Articles

error: Content is protected !!