512
ಉಡುಪಿ : ಖಾಸಗಿ ಬಸ್ ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ನಿವೃತ್ತ ಶಿಕ್ಷಕ ಸ್ಥಳದಲ್ಲೇ ಮೃತಪಟ್ಟ ಘಟನೆ ಮಲ್ಪೆಯ ಕಲ್ಯಾಡಿಯಲ್ಲಿ ನಡೆದಿದೆ ಮೃತರನ್ನು ಮಲ್ಪೆ ಕೊಪ್ಪಲತೋಟ ನಿವಾಸಿ ಭಾಸ್ಕರ್ ಎಂದು ಗುರುತಿಸಲಾಗಿದೆ. ಗುರುವಾರ ಮಧ್ಯಾಹ್ನ ದ್ವಿಚಕ್ರ. ವಾಹನದಲ್ಲಿ ಹೋಗುತ್ತಿದ್ದಾಗ ಬ್ರೇಕ್ ಫೈಲ್ ಆದ ಖಾಸಗಿ ಬಸ್ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಇದರಿಂದ ಬಸ್ ಹಿಂಬದಿಯ ಚಕ್ರಕ್ಕೆ ಸಿಲುಕಿದ ಭಾಸ್ಕರ್ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

