246
ಉಡುಪಿ : ಉದ್ಯಾವರದ ರಾಷ್ಟ್ರೀಯ ಹೆದ್ದಾರಿ 66 ರ ಪೆಟ್ರೋಲ್ ಬಂಕ್ ಬಳಿಯ ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಟೂರಿಸ್ಟ್ ವಾಹನಯೊಂದು ಹಿಂದಿನಿಂದ ಬಂದು ಡಿಕ್ಕಿ ಹೊಡೆದ ಪರಿಣಾಮ ಹಲವು ಪ್ರವಾಸಿಗರು ಗಂಭೀರ ಗಾಯಗೊಂಡ ಘಟನೆ ಇಂದು ಭಾನುವಾರ ಮುಂಜಾನೆ ಸಂಭವಿಸಿದೆ
ಪುಣ್ಯಕ್ಷೇತ್ರ ದರ್ಶನಕ್ಕೆ ಹೊರಟಿದ್ದ ಹೊರ ರಾಜ್ಯದ ಪ್ರವಾಸಿಗರ ಮಿನಿ ಬಸ್ ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಢಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ ಮಹಿಳೆಯರೂ ಸೇರಿದಂತೆ ಹಲವು ಪ್ರಯಾಣಿಕರು ಗಂಭೀರ ಗಾಯಗೊಂಡಿದ್ದಾರೆ
ತಕ್ಷಣ ಸ್ಥಳಕ್ಕೆ ಆಗಮಿಸಿದ ಕಾಪು ಪೊಲೀಸರು ಹಾಗೂ ಸಾರ್ವಜನಿಕರು ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ ಟೂರಿಸ್ಟ್ ವಾಹನ ಜಖಂಗೊಂಡಿದ್ದು ಘಟನಾ ಸ್ಥಳಕ್ಕೆ ಕಾಪು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ

