ಮೂಡುಬಿದಿರೆ : ಖಾಸಗಿ ಬಸ್ಸೊಂದು ಮುಂಭಾಗದಲ್ಲಿ ಬರುತ್ತಿದ್ದ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ತಾಯಿ ಮತ್ತು ಮಗಳು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ತೋಡಾರಿನಲ್ಲಿ ನಡೆದಿದೆ. ಘಟನೆಯಿಂದ ಉದ್ರಿಕ್ತಗೊಂಡ ವಿದ್ಯಾರ್ಥಿಗಳು ಬಸ್ ಗಾಜು ಹೊಡೆದು ಪ್ರತಿಭಟನೆ ನಡೆಸಿದ್ದಾರೆ.
ಖಾಸಗಿ ಬಸ್ ಮೂಡುಬಿದಿರೆಯಿಂದ ಮಂಗಳೂರಿನತ್ತ ಸಂಚರಿಸುತ್ತಿತ್ತು. ಬಸ್ ತೋಡಾರ್ ಮೈಟ್ ಕಾಲೇಜ್ ಮುಂಭಾಗ ಬರುತ್ತಿದ್ದಂತೆ ಕಾಲೇಜು ಬಸ್ಸೊಂದು ಸಂಚರಿಸುತ್ತಿತ್ತು. ಈ ವೇಳೆ ಖಾಸಗಿ ಬಸ್ ಓವರ್ ಟೇಕ್ ಮಾಡುವ ಭರದಲ್ಲಿ ಕಾಲೇಜ್ ಬಸ್ಗೆ ಡಿಕ್ಕಿ ಹೊಡೆದು ಮುಂಭಾಗದಲ್ಲಿ ತಾಯಿ ಮತ್ತು ಪುತ್ರಿ ಸಂಚರಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದಿದೆ.ಘಟನೆಯಲ್ಲಿ ತಾಯಿಗೆ ಅಲ್ಪಸ್ವಲ್ಪ ಗಾಯಗಳಾಗಿದ್ದು ಪುತ್ರಿ ಗಂಭೀರವಾಗಿ ಗಾಯಗೊಂಡಿದ್ದಾಳೆ.
ಸ್ಥಳಕ್ಕೆ ಮೂಡುಬಿದಿರೆ ಪೊಲೀಸರು ಭೇಟಿ ನೀಡಿ ಉದ್ರಿಕ್ತಗೊಂಡಿರುವ ವಿದ್ಯಾರ್ಥಿಗಳನ್ನು ಸಮಧಾನ ಪಡಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ