ಬೆಳಗಾವಿ : ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತೆರಳುತ್ತಿದ್ದ ಕಾರು ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಸಮೀಪದಲ್ಲಿ ಅಪಘಾತಕ್ಕೀಡಾಗಿದ್ದು.ಅದೃಷ್ಟವಶಾತ್ ಲಕ್ಷ್ಮಿ ಹೆಬ್ಬಾಳ್ಕರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ
ಬೆಂಗಳೂರಿನಿಂದ ಬೆಳಗಾವಿಗೆ ಬರುವಾಗ ಬೆಳಗಿನ ಜಾವ ಅಪಘಾತ ನಡೆದಿದ್ದು ಗಾಯಗೊಂಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ರವರನ್ನು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ
ಲಕ್ಷ್ಮಿ ಹೆಬ್ಬಾಳ್ಳರ್ ಅವರ ಬೆನ್ನಿನ ಎಲ್ 1 ಮತ್ತು ಎಲ್ 4 ಮೂಳೆಗಳು ಮುರಿತವಾಗಿದೆ ಕುತ್ತಿಗೆಗೆ ಪೆಟ್ಟು ಬಿದ್ದಿದೆ, ಅವರ ಮೆದುಳಿಗೆ ಬಾವು ಬಂದಿದೆ ಆದ್ದರಿಂದ ನಾವು ಅವರಿಗೆ ಚಿಕಿತ್ಸೆ ನೀಡುತ್ತಿದ್ದೇವೆ ಮತ್ತು ಅವರು ಶೀಘ್ರದಲ್ಲೇ ಚೇತರಿಸಿಕೊಳ್ಳುತ್ತಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಕಾರಿನಲ್ಲಿದ್ದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಅವರ ಸೋದರ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅಪಾಯದಿಂದ ಪಾರಾಗಿದ್ದಾರೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ