ಕುಂದಾಪುರ : ತ್ರಾಸಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ಸ್ಥಳೀಯ ನಿವಾಸಿ ಗೌರಿ ಶೆಟ್ಟಿಗಾರ್ (60) ಗಂಭೀರ ಗಾಯಗೊಂಡಿದ್ದಾರೆ. ಕಾರು ಬೈಂದೂರು ಕಡೆಯಿಂದ ಕುಂದಾಪುರದತ್ತ ಆಗಮಿಸುತ್ತಿತ್ತು ಢಿಕ್ಕಿ ಹೊಡೆದ ರಭಸಕ್ಕೆ ಮಹಿಳೆ ಸ್ವಲ್ಪ ದೂರಕ್ಕೆ ಎಸೆಯಲ್ಪಟ್ಟಿದ್ದು, ಪ್ರಜ್ಞೆ ತಪ್ಪಿ ಬಿದ್ದರು. ತತ್ಕ್ಷಣ ಅವರನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದಾರೆ ಗಂಗೊಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.