ಉಡುಪಿ : ಉಡುಪಿ ಬಳಿಯ ಕಿನ್ನಿಮೂಲ್ಕಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಗ್ಯಾಸ್ ಟ್ಯಾಂಕರ್ ವೊಂದು ಪಲ್ಟಿಯಾದ ಘಟನೆ ನಡೆದಿದೆ
ಗುಜರಾತ್ ಕಡೆಯಿಂದ ಮಂಗಳೂರಿಗೆ ಆಗಮಿಸುತ್ತಿದ್ದ ಸಾಗುತ್ತಿದ್ದ ಟ್ಯಾಂಕರ್ ಕಿನ್ನಿಮೂಲ್ಕಿ ಸಮೀಪ ತಲುಪುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ಮಗುಚಿಬಿದ್ದಿದೆ ಚಾಲಕ ಹಾಗೂ ಕ್ಲಿನರ್ ಸಣ್ಣಪುಟ್ಟ ಗಾಯದೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.
ರಾಷ್ಟ್ರೀಯ ಹೆದ್ದಾರಿಯ ಸಂಚಾರದಲ್ಲಿ ಕೆಲವು ಕಾಲ ವ್ಯತ್ಯಯ ಉಂಟಾಯಿತು. ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಇಲಾಖೆಯ ಸಿಬ್ಬಂದಿ ಕಾರ್ಯಾಚರಣೆ ಮೂಲಕ ಟ್ಯಾಂಕರ್ ಅನ್ನು ತೆರವುಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ