ಕುಂದಾಪುರ : ಆಟೋ ರಿಕ್ಷಾ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಕುಂದಾಪುರ ಬಸ್ರೂರು ಮೂರುಕೈ ಸಮೀಪದ ವಡೇರಹೋಬಳಿ ಎಂಬಲ್ಲಿ ಸಂಭವಿಸಿದೆ. ಅಪಘಾತದ ಬಳಿಕ ರಿಕ್ಷಾ ಚಾಲಕ ನಿಲ್ಲಿಸದೆ ಪರಾರಿಯಾಗಿ ಅಮಾನವೀಯತೆ ಮೆರೆದಿದ್ದು ಒಂದಷ್ಟು ಗಂಟೆ ಬಳಿಕ ಠಾಣೆಗೆ ಬಂದು ಶರಣಾಗಿದ್ದಾನೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಇಲ್ಲಿನ ವಡೇರಹೋಬಳಿ ಬೆಟ್ಟಾಗರ ಮನೆ ನಿವಾಸಿ ಸೋಮಯ್ಯ (61) ಮೃತ ದುರ್ದೈವಿ.
ಸೋಮಯ್ಯ ಅವರು ನಿತ್ಯ ಬೆಳಿಗ್ಗೆ ವಾಕೀಂಗ್ ಮಾಡುವ ಹವ್ಯಾಸ ಹೊಂದಿದ್ದರು. ಬುಧವಾರವೂ ವಾಕಿಂಗ್ ತೆರಳಿದ್ದ ವೇಳೆ ರಿಕ್ಷಾ ಅಪಘಾತ ನಡೆಸಿ ಪರಾರಿಯಾಗಿದ್ದು ಗಾಯಗೊಂಡು ಗದ್ದೆಗೆ ಬಿದ್ದ ಸೋಮಯ್ಯ ಮೃತಪಟ್ಟಿದ್ದಾರೆ.
ಅದೇ ದಾರಿಯಲ್ಲಿ ಬರುತ್ತಿದ್ದ ಸೋಮಯ್ಯ ಅವರ ಸಂಬಂಧಿಯೊಬ್ಬರು ಗದ್ದೆಯಲ್ಲಿ ವ್ಯಕ್ತಿ ಬಿದ್ದಿರುವುದನ್ನು ಕಂಡಿದ್ದು ಪರಿಶೀಲಿಸಿದಾಗ ಸೋಮಯ್ಯ ಎಂದು ತಿಳಿದುಬಂದಿದೆ. ಕೂಡಲೇ ಮನೆಗೆ ತೆರಳಿ ಸುದ್ದಿ ಮುಟ್ಟಿಸಿ ಮರಳಿ ಬಂದು ಕುಟುಂಬಿಕರ ಜೊತೆ ಆಸ್ಪತ್ರೆಗೆ ಕರೆದೊಯ್ದಿದ್ದು ಅಷ್ಟರಲ್ಲಾಗಲೇ ಸೋಮಯ್ಯ ಮೃತಪಟ್ಟಿರುವುದು ತಿಳಿದುಬಂದಿದ್ದು ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ