30
ಕಾರ್ಕಳ : ಕಾರ್ಕಳ ಸಮೀಪದ ಮಾಳ ಗ್ರಾಮದ ಮುಳ್ಳೂರು ಎಂಬಲ್ಲಿ ಟಾಟಾ ಏಸ್ ಮಿನಿ ಟೆಂಪೊ ಬ್ರೇಕ್ ಫೇಲಾಗಿ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಪರಿಣಾಮವಾಗಿ ಓರ್ವ ಸ್ಥಳದಲ್ಲೇ ಮೃತಪಟ್ಟು ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಸಂಭವಿಸಿದೆ. ಈ ಅಪಘಾತದಲ್ಲಿ ಮಹಾರಾಷ್ಟ್ರ ಮೂಲದ ಜಿತೇಂದರ್ (36) ಮೃತಪಟ್ಟಿದ್ದು, ಹುಬ್ಬಳ್ಳಿಯ ರಾಜಾ (37), ಆದಿತ್ಯ (20), ಭದ್ರಾವತಿಯ ಬಾಬು (55) ಹಾಗೂ ಶಾಬಾಸ್ (25) ಗಂಭೀರವಾಗಿ ಗಾಯಗೊಂಡಿದ್ದಾರೆ.
ವಾಹನದಲ್ಲಿದ್ದ ಪ್ರಯಾಣಿಕರೆಲ್ಲಾ ಜಾತ್ರಾ ವ್ಯಾಪಾರಿಗಳಾಗಿದ್ದು ಕಳಸ ಜಾತ್ರೆ ಮುಗಿಸಿ ಮಂದಾರ್ತಿ ಜಾತ್ರೆಗೆ ಹೋಗುತ್ತಿದ್ದ ಸಂದರ್ಭ ಇವರು ಪ್ರಯಾಣಿಸುತ್ತಿದ್ದ ವಾಹನ ಮಾಳ ಮುಳ್ಳೂರು ಘಾಟಿ ಕೆಳಗೆ ಪೆಟ್ರೋಲ್ ಬಂಕ್ ಬಳಿ ಬ್ರೇಕ್ ವೈಫಲ್ಯಕ್ಕೊಳಗಾಗಿ ಪಲ್ಟಿ ಹೊಡೆದಿದೆ. ಗಾಯಾಳುಗಳನ್ನು ಕಾರ್ಕಳ ತಾಲೂಕು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ವೆಸ್ಲಾಕ್ ಆಸ್ಪತ್ರೆಗೆ ಸಾಗಿಸಲಾಗಿದೆ. ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
![](https://kundapurxpress.com/wp-content/uploads/2025/02/WhatsApp-Image-2025-02-05-at-12.29.39-PM.jpeg)
![](https://kundapurxpress.com/wp-content/uploads/2024/11/IMG-20241128-WA0000.jpg)