235
ಉಡುಪಿ : ಇಲ್ಲಿನ ಅಜ್ಜರಕಾಡು ಅಗ್ನಿಶಾಮಕದಳ ಠಾಣೆಯ ಸಮೀಪ ರಾತ್ರಿ ವೇಳೆ ಎರಡು ಬೈಕ್ ಗಳ ಮಧ್ಯೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಓರ್ವ ಸವಾರ ಮೃತಪಟ್ಟ ಬಗ್ಗೆ ವರದಿಯಾಗಿದೆ.
ಮೃತರನ್ನು ಸ್ಥಳೀಯರಾದ ಸ್ಯಾಮುಯೆಲ್ ಸದಾನಂದ ಕರ್ಕಡ (59) ಎಂದು ಗುರುತಿಸಲಾಗಿದೆ. ವೇಗದಿಂದ ಬಂದ ಎರಡು ಬೈಕ್‌ಗಳು ಮುಖಾಮುಖಿ ಢಿಕ್ಕಿಯಾದ ಪರಿಣಾಮ ಸದಾನಂದ ರಸ್ತೆಗೆ ಬಿದ್ದರೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಸ್ಯಾಮುಯೆಲ್ ಅವರು ಸ್ಥಳದಲ್ಲೇ ಮೃತಪಟ್ಟರೆಂದು ತಿಳಿದು ಬಂದಿದೆ. ಅಪಘಾತದಿಂದ ಎರಡು ಬೈಕ್‌ಗಳು ಕೂಡ ಸಂಪೂರ್ಣ ನಜ್ಜುಗುಜ್ಜಾಗಿವೆ. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

