ಕುಂದಾಪುರ:ಗಂಗೊಳ್ಳಿಯ ತ್ರಾಸಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 66 ರ ಕರ್ನಾಟಕ ಬ್ಯಂಕ್ ಬಳಿ ಕಾರೊಂದು ರಿಕ್ಷಾವನ್ನು ಓವರ್ ಟೇಕ್ ಮಾಡುವ ಭರದಲ್ಲಿ ನಡೆದುಕೊಂಡು ಹೋಗುತ್ತಿದ್ದ ಜನಾರ್ಧನ ಪೂಜಾರಿ ಎಂಬವರಿಗೆ ಡಿಕ್ಕಿ ಹೊಡೆದ ಪರಿಣಾಮ 2 ಕಾಲು ಮತ್ತು ಹಣೆಗೆ ತೀವ್ರ ಸ್ವರೂಪದ ಗಾಯವಾಗಿದ್ದು ಕೂಡಲೇ ಅಂಬಲೆನ್ಸ್ ಮೂಲಕ ಕುಂದಾಪುರದ ಚಿನ್ಮಯಿ ಅಸ್ಪತ್ರೆಗೆ ಕರೆತಂದು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಕೆ ಎಂ ಸಿ ಗೆ ದಾಖಲು ಮಾಡಲಾಗಿದ್ದು ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ