158
ಉಡುಪಿ, : ಉಡುಪಿ ಸಮೀಪದ ಅಂಬಾಗಿಲು ಬಳಿಯ ರಾಷ್ಟ್ರೀಯ ಹೆದಾರಿಯಲ್ಲಿ ಗುಜರಿ ಸಾಮಗ್ರಿಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಅದರಲ್ಲಿದ್ದ ಕಾರ್ಮಿಕರು ಸಹಿತ ಒಟ್ಟು ಆರು ಮಂದಿ ಗಾಯಗೊಂಡಿದ್ದಾರೆ. ತಕ್ಷಣ ಸ್ಥಳಿಯರು ಸ್ಥಳಕ್ಕೆ ಧಾವಿಸಿ ಗಾಯಗೊಂಡ ಲಾರಿ ಚಾಲಕ, ನಾಲ್ಕು ಮಂದಿ ಕಾರ್ಮಿಕರು ಹಾಗೂ ಬೈಕ್ ಸವಾರನನ್ನು ತಮ್ಮ ವಾಹನದಲ್ಲಿಯೇ ಕರೆದೊಯ್ದು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬೈಕ್ ಸವಾರ ಲಾರಿಗೆ ಅಡ್ಡ ಬಂದ ಕಾರಣ ಅದನ್ನು ತಪ್ಪಿಸುವ ವೇಳೆ ಲಾರಿ ಪಲ್ಟಿಯಾಗಿದೆ. ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

