306
ಬ್ರಹ್ಮಾವರ : ಬ್ರಹ್ಮಾವರ ರಾಷ್ಟ್ರೀಯ ಹೆದ್ದಾರಿ 66ರ ಬಳಿ ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ವಿದ್ಯಾರ್ಥಿಗೆ ಡಿಕ್ಕಿ ಹೊಡೆದ ಪರಿಣಾಮ ಶಾಲಾ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ
ಬ್ರಹ್ಮಾವರ ಮಹೇಶ್ ಆಸ್ಪತ್ರೆಯ ಜಂಕ್ಷನ್ ಬಳಿ ನಡೆದ ಅಪಘಾತದಲ್ಲಿ ಬ್ರಹ್ಮಾವರ ಎಸ್.ಎಮ್.ಎಸ್. ಶಾಲೆಯ 6ನೇ ತರಗತಿಯ ವಿದ್ಯಾರ್ಥಿ ವಂಶಿ ಜಿ. ಶೆಟ್ಟಿ(14 ವರ್ಷ) ಮೃತಪಟ್ಟ ನತದೃಷ್ಟ ವಿದ್ಯಾರ್ಥಿ
ವಂಶಿ ಇಂದು ಬೆಳಿಗ್ಗೆ ಶಾಲೆಗೆಂದು ತೆರಳುತ್ತಿದ್ದಾಗ ಹೆದ್ದಾರಿ ರಸ್ತೆ ದಾಟಲು ಮುಂದಾಗಿದ್ದಾನೆ. ಈ ಸಂದರ್ಭದಲ್ಲಿ ಕುಂದಾಪುರದಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಾರೊಂದು ರಭಸವಾಗಿ ಬಂದು ಡಿಕ್ಕಿ ಹೊಡೆದಿದೆ. ತಕ್ಷಣವೇ ಆತನನ್ನು ಹತ್ತಿರದ ಮಹೇಶ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಆತ ಮೃತಪಟ್ಟಿದ್ದು ಬ್ರಹ್ಮಾವರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

