166
ಕುಂದಾಪುರ : ಹಟ್ಟಿಯಂಗಡಿ ಗ್ರಾಮದ ನೇರಳಕಟ್ಟೆ-ತಲ್ಲೂರು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ಅಶೋಕ್ ಎಂಬವರು ಗಾಯಾಳು ವ್ಯಕ್ತಿಯಾಗಿದ್ದು ಅವರನ್ನು ಚಿಕಿತ್ಸೆಗಾಗಿ ಕುಂದಾಪುರದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳು ಬೈಕ್ ಸವಾರ ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

