131
ಕುಂದಾಪುರ : ಕೊಲ್ಲೂರು ರಾಜ್ಯ ಹೆದ್ದಾರಿಯ ಇಡೂರು-ಕುಂಜ್ಞಾಡಿ ಗ್ರಾಮದ ಜನ್ನಾಲ್ ಎಂಬಲ್ಲಿ ಮಿನಿ ಗೂಡ್ಸ್ ವಾಹನ ಅಲ್ಟೋ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಚಾಲಕ ಮೃತಪಟ್ಟ ಘಟನೆ ನಡೆದಿದೆ.
ಕೊಲ್ಲೂರಿನಿಂದ ಕುಂದಾಪುರದ ಕಡೆಗೆ ಸಾಗುತ್ತಿದ್ದ ಮಿನಿ ಗೂಡ್ಸ್ ವಾಹನ ಅಲ್ಟೋ ಕಾರಿಗೆ ಎದುರಿನಿಂದ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಚಾಲಕ ಜೋಸ್ ಪಿಟಿ ಯಾನೆ ರಿನ್ನೊ ಗಂಭೀರ ಗಾಯಗೊಂಡಿದ್ದು, ಚಿಕಿತ್ಸೆಯ ಬಗ್ಗೆ ಇಲ್ಲಿನ ಖಾಸಗಿ ಆಸ್ಪತ್ರೆಗೆ ಕರೆತರಲಾಗಿದ್ದು ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ. ಕಾರಿನಲ್ಲಿ ಪಯಣಿಸುತ್ತಿದ್ದ ತ್ರೇಸಿಯಮ್ಮ ಯಾನೆ ಶಾಂತಿ ಗಂಭೀರ ಗಾಯಗೊಂಡಿದ್ದು, ಅವರನ್ನು ಮಣಿಪಾಲ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಕೊಲ್ಲೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

