Home » ಲಾರಿ ಡಿಕ್ಕಿಯಾಗಿ ಓರ್ವ ಸಾವು
 

ಲಾರಿ ಡಿಕ್ಕಿಯಾಗಿ ಓರ್ವ ಸಾವು

by Kundapur Xpress
Spread the love

ಕಾಪು : ರಾ.ಹೆ. 66ರ ಮೂಳೂರು ಎಂಬಲ್ಲಿ ಲಾರಿ ಡಿಕ್ಕಿ ಹೊಡೆದು ಯುವಕನೋರ್ವ ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ. ಮೂಳೂರು ಫಿಶರೀಸ್ ರಸ್ತೆ ನಿವಾಸಿ ಧನಂಜಯ ಸುವರ್ಣ (46) ಎಂಬವರೇ ಮೃತರು.

ಮಂಗಳೂರಿನಿಂದ ಉಡುಪಿ ಕಡೆಗೆ ಚಲಿಸುತ್ತಿದ್ದ ಲಾರಿಯೊಂದು ಮೂಳೂರು ಎಂಬಲ್ಲಿ ರಸ್ತೆ ದಾಟಲು ನಿಂತಿದ್ದ ಯುವಕನೋರ್ವರಿಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ರಸ್ತೆಗೆ ಬಿದ್ದ ಅವರ ಮೇಲೆ ಲಾರಿಯ ಚಕ್ರ ಹರಿದಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಅಪಘಾತದ ಬಳಿಕ ಚಾಲಕ ಲಾರಿಯನ್ನು ನಿಲ್ಲಿಸದೇ ಪರಾರಿಯಾಗಿದ್ದು, ಲಾರಿಯ ಪತ್ತೆಗಾಗಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

 

Related Articles

error: Content is protected !!