Home » ಸ್ಕೂಟರಿಗೆ ಕಾರು ಡಿಕ್ಕಿ : ಸವಾರ ಸ್ಥಳದಲ್ಲೇ ಸಾವು
 

ಸ್ಕೂಟರಿಗೆ ಕಾರು ಡಿಕ್ಕಿ : ಸವಾರ ಸ್ಥಳದಲ್ಲೇ ಸಾವು

by Kundapur Xpress
Spread the love

ಕಾರ್ಕಳ : ಕಾರು ಹಾಗೂ ಸ್ಕೂಟರ್ ನಡುವೆ ಡಿಕ್ಕಿ ಸಂಭವಿಸಿ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ಕಾರ್ಕಳ ತಾಲೂಕಿನ ನಿಟ್ಟೆ ಸರ್ಕಾರಿ ಆಸ್ಪತ್ರೆಯ ಬಳಿ ಬುಧವಾರ ಸಂಜೆ ಸಂಭವಿಸಿದೆ. ನಿಟ್ಟೆ ಕುಡಾರಿಕು ಗುಂಡಲೆ ನಿವಾಸಿ ಯಶವಂತಿ ಶೆಟ್ಟಿ (45) ಎಂಬವರು ಮೃತಪಟ್ಟವರು.

ಅವರು ಕಾರ್ಕಳದಿಂದ ‘ಸ್ಕೂಟರ್‌ನಲ್ಲಿ ಮನೆಯಾದ ಕುಡಾರಿಕು ಗುಂಡಲೆ ಕಡೆಗೆ ಹೋಗುತ್ತಿದ್ದಾಗ ಹಿಂದಿನಿಂದ ವೇಗವಾಗಿ ಬಂದ ಕಾರು ಡಿಕ್ಕಿಯಾಗಿದೆ. ಈ ಭೀಕರ ಅಪಘಾತಕ್ಕೆ ಯಶವಂತಿ ಶೆಟ್ಟಿಯವರು ಸ್ಥಳದಲ್ಲೇ ಮೃತಪಟ್ಟಿದ್ದು, ಈ ಕುರಿತು ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Related Articles

error: Content is protected !!