ಪುತ್ತೂರು : ದ.ಕ ಜಿಲ್ಲೆಯ ಪುತ್ತೂರು ತಾಲೋಕಿನ ಹೊರವಲಯದ ಪರ್ಲಡ್ಕದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ
ಕಾರೊಂದು ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿ ಬಿದ್ದ ಪರಿಣಾಮ ಮೂವರು ಮೃತಪಟ್ಟ ಪುತ್ತೂರು ಬೈಪಾಸ್ ರಸ್ತೆಯಲ್ಲಿ ಸಂಭವಿಸಿದೆ.
ಸುಳ್ಯ ಜಟ್ಟಿಪಳ್ಳ ನಿವಾಸಿಗಳಾದ ಅಣ್ಣು ನಾಯ್ಕ, ಅವರ ಮಗ ಚಿದಾನಂದ್, ಪಕ್ಕದ ಮನೆಯ ರಮೇಶ್ ನಾಯ್ಕ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.
ಇವರು ಸುಳ್ಯದಿಂದ ಪುತ್ತೂರಿನ ಪುಣಚಕ್ಕೆ ಆಗಮಿಸುತ್ತಿದ್ದ ವೇಳೆ ಬೆಳಗ್ಗಿನ ಜಾವ ಪರ್ಲಡ್ಕದಲ್ಲಿ ಈ ಅಪಘಾತ ಸಂಭವಿಸಿದೆ. ನಿದ್ದೆಯ ಮಂಪರಿನಲ್ಲಿ ಅಪಘಾತ ನಡೆದಿರುವುದಾಗಿ ಶಂಕಿಸಲಾಗಿದೆ. ಸ್ಥಳಕ್ಕೆ ಪುತ್ತೂರು ಸಂಚಾರಿ ಠಾಣಾ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.