ಸಾಗರ : ಸಾಗರದ ಹೊಳೆಬಾಗಿಲು ಸಮೀಪ ಗೆಣಸಿನಕುಣಿ ಗ್ರಾಮದ ಸಮೀಪದಲ್ಲಿ ಖಾಸಗಿ ಬಸ್ಸೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ 35ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಕರೆಂಟ್ ಶಾಕ್ ತಗಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ
ಹೊಳೆ ಬಾಗಿಲಿನಿಂದ ಸಾಗರಕ್ಕೆ 45 ಮಂದಿ ಪ್ರಯಾಣಿಕರು ಪ್ರಯಾಣಿಸುತ್ತಿದ್ದು ಖಾಸಗಿ ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ ಈ ವೇಳೆ 35 ವಿದ್ಯಾರ್ಥಿಗಳಿಗೆ ಕರೆಂಟ್ ಶಾಕ್ ತಗಲಿದ್ದು ಕೆಲವರು ಬಸ್ಸಿನೊಳಗೆ ಉರುಳಿ ಬಿದ್ದರು ಎನ್ನಲಾಗಿದೆ ಗಾಯಾಳು ವಿದ್ಯಾರ್ಥಿಗಳಿಗೆ ಸಾಗರದ ಉಪ ವಿಭಾಗೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ