ಕುಂದಾಪುರ: ನಿನ್ನೆ ಬುಧವಾರ ರಾತ್ರಿ 8.30 ರ ಸುಮಾರಿಗೆ ಹೆಮ್ಮಾಡಿ ಗ್ರಾಮದ ಜಾಲಾಡಿ ಹತ್ತಿರ ರಾಷ್ಟ್ರೀಯ ಹೆದ್ದಾರಿ 66ರ ಬಳಿ ನಿಂತುಕೊಂಡಿದ್ದ ವಿಠಲ್ ಎಂಬವರಿಗೆ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದು ಮೃತಪಟ್ಟಿದ್ದಾರೆ
ಕುಂದಾಪುರ – ಬೈಂದೂರು ಏಕಮುಖ ರಸ್ತೆಯಲ್ಲಿ ಕುಂದಾಪುರ ಕಡೆಯಿಂದ ಬೈಂದೂರು ಕಡೆಗೆ ಒಂದು ಅಪರಿಚಿತ ವಾಹನ ಚಾಲಕ ತಾನು ಚಲಾಯಿಸುತ್ತಿದ್ದ ವಾಹನವನ್ನು ಅತೀ ವೇಗ ಮತ್ತು ಅಜಾಗರೂಕತೆಯಿಂದ ತನ್ನ ತೀರಾ ಎಡ ಬದಿಗೆ ಚಲಾಯಿಸಿಕೊಂಡು ಬಂದು ಹೆಮ್ಮಾಡಿ ಜಾಲಾಡಿಯ ಬಸವರಾಜ ಎಂಬವರ ಸ್ಟಿಕ್ಕರ್ ಕಟ್ಟಿಂಗ್ ಶಾಪ್ ಎದುರು ರಸ್ತೆಯನ್ನು ದಾಟಲು ನಿಂತುಕೊಂಡಿದ್ದ ವಿಠಲ್ (46 ವರ್ಷ) ಇವರಿಗೆ ಡಿಕ್ಕಿ ಹೊಡೆದ ಪರಿಣಾಮ ಅವರು ರಸ್ತೆಯ ಮೇಲೆ ಬಿದ್ದು ಅವರ ತಲೆಗೆ ಮತ್ತು ಎಡ ಕಾಲಿಗೆ ಗಂಭೀರ ಗಾಯವಾಗಿದ್ದು ತಕ್ಷಣ ಇವರನ್ನು ಕುಂದಾಪುರ ಸರಕಾರಿ ಆಸ್ಪತ್ರೆಗೆ ಅಂಬುಲೆನ್ಸ್ ವಾಹನದಲ್ಲಿ ಕರೆದುಕೊಂಡು ಬಂದಾಗ ಇಲ್ಲಿ ಪರೀಕ್ಷಿಸಿದ ವೈದ್ಯರು ರಾತ್ರಿ 9.00 ಗಂಟೆಗೆ ಮೃತ ಪಟ್ಟಿರುವುದಾಗಿ ತಿಳಿಸಿದ್ದಾರೆ
ಅಪರಿಚಿತ ವಾಹನ ಚಾಲಕನು ಅಪಘಾತ ಪಡಿಸಿದ ನಂತರ ತನ್ನ ವಾಹನವನ್ನು ಸ್ಥಳದಲ್ಲಿ ನಿಲ್ಲಿಸದೇ ಗಾಯಾಳುವಿಗೆ ಚಿಕಿತ್ಸೆಗೆ ವ್ಯವಸ್ಥೆ ಮಾಡದೇ ಪೊಲೀಸರಿಗೂ ಮಾಹಿತಿ ನೀಡದೇ ವಾಹನವನ್ನು ಹೆಮ್ಮಾಡಿ ಕಡೆಗೆ ಚಲಾಯಿಸಿಕೊಂಡು ಹೋಗಿ ಪರಾರಿಯಾದ ಬಗ್ಗೆ ಮೃತರ ಬಾವ ಜಗನ್ನಾಥರವರು ನೀಡಿದ ದೂರಿನಂತೆ ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ