231
ಕಾರ್ಕಳ : ನಿಟ್ಟೆ ದೂಪದಕಟ್ಟೆ ಬಳಿ ರಸ್ತೆ ಬದಿ ನಿಂತಿದ್ದ ಮಹಿಳೆ ಮೃತ್ಯುವಿಗೀಡಾದ ಘಟನೆ ಜೂ. 15ರಂದು ನಡೆದಿದೆ. ವೀಣಾ (59 ವರ್ಷ) ಮೃತಪಟ್ಟ ದುರ್ದೈವಿ
ನಿಟ್ಟೆ ಕಡೆಯಿಂದ ಕಾರ್ಕಳ ಕಡೆಗೆ ಬರುತ್ತಿದ್ದ ಕಾರನ್ನು ಅದರ ಚಾಲಕ ಅತಿವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ದೂಪದಕಟ್ಟೆ ಗುಲಾಬಿ ಹೋಟೆಲ್ ಮುಂಭಾಗದಲ್ಲಿ ರಸ್ತೆ ದಾಟಲು ರಸ್ತೆ ಬದಿ ನಿಂತಿದ್ದ ವೀಣಾ ಇವರಿಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ಪರಿಣಾಮ, ಅವರ ತಲೆಯ ಹಿಂಬದಿಗೆ ತೀವ್ರ ಸ್ವರೂಪದ ಪೆಟ್ಟಾಗಿದ್ದು, ಚಿಕಿತ್ಸೆಗಾಗಿ ಕಾರ್ಕಳದ ಖಾಸಗಿ ನರ್ಸಿಂಗ್ ಹೋಂನಲ್ಲಿ ಪ್ರಥಮ ಚಿಕಿತ್ಸೆ ಪಡೆದು, ಬಳಿಕ ಕಾರ್ಕಳ ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆ ಚಿಕಿತ್ಸೆಗಾಗಿ ಕರೆದುಕೊಂಡು ಹೋಗಲಾಗಿತ್ತು. ಇಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಕೆ.ಎಂ.ಸಿ. ಆಸ್ಪತ್ರೆಗೆ ದಾಖಲಿಸಿದ್ದು ಅವರು ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ. ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

